ಕನ್ನಡ ಚಿತ್ರರಂಗದಲ್ಲಿ ಕಂಟೆಂಟ್ ಆಧಾರಿತ ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ರವಿಕೆ ಪ್ರಸಂಗ ಸಿನಿಮಾವು ಕೂಡ ಸೇರುತ್ತದೆ. ಈಗಾಗಲೇ ಚಿತ್ರೀಕರಣ ಮುಗಿಸಿ, ಈ ಸಿನಿಮಾದ ಟೀಸರ್ ಹಾಗೂ ಹಾಡುಗಳಿಂದಲೇ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ.
ಇತ್ತೀಚೆಗೆ ರವಿಕೆ ಪ್ರಸಂಗ ಚಿತ್ರದ ಪ್ರೀ ರಿಲೀಸ್ ಇವೆಂಟನ್ನು ಕನಕಪುರ ರಸ್ತೆಯ ಫೋರಮ್ ಮಾಲ್ನಲ್ಲಿ ನಡೆಸಲಾಗಿತ್ತು. ಸಾವಿರಾರು ಜನರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಅಲ್ಲಿಗೆ ಬಂದಿದ್ದ ಜನರೆಲ್ಲರೂ ರವಿಕೆ ಪ್ರಸಂಗ ಚಿತ್ರದ ಪೋಸ್ಟರ್ ಹಿಡಿದು ಶುಭಕೋರಿದರು. ನಿರ್ದೇಶಕರಾದ ಸಂತೋಷ್ ಕೊಡೆಂಕೇರಿ ಅವರು, ಕಥೆಗಾರ್ತಿ ಮತ್ತು ಸಂಭಾಷಣಾಗಾರ್ತಿ ಪಾವನ ಸಂತೋಷ್, ಚಿತ್ರದ ನಾಯಕಿಯಾದ ಗೀತಾಭಾರತಿ ಭಟ್, ಪದ್ಮಜಾರಾವ್, ಜೊತೆಗೆ ಪೋಷಕ ಕಲಾವಿದರು, ಚಿತ್ರದ ಸಂಕಲನಾಕಾರರಾದ ರಘು ಉಪಸ್ಥಿತರಿದ್ದರು.
ಬಹಳಮುಖ್ಯವಾಗಿ ಗೀತಾಭಾರತಿ ಭಟ್ ಅವರು ಅಲ್ಲಿದ್ದ ನೂರಾರು ಜನರೊಂದಿಗೆ ರವಿಕೆ ಪ್ರಸಂಗ ಚಿತ್ರದ ಹಾಡಿಗೆ ಹೆಜ್ಜೆ ಹಾಕಿದರು. ಬಹಳ ವಿಶೇಷವಾಗಿ ಸ್ಟೇಜ್ ಮೇಲೆ ಕರ್ನಾಟಕದ ಬೆಸ್ಟ್ ಟೈಲರ್ ಅನ್ನು ಗುರುತಿಸುವ ಕಂಟೆಸ್ಟ್ ಲಾಂಚ್ ಮಾಡಲಾಯಿತು. ಬೆಸ್ಟ್ ಟೈಲರನ್ನು ಗುರುತಿಸಿ ಭರ್ಜರಿ ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ಚಿತ್ರತಂಡ ಘೋಷಿಸಿದೆ. ವಿಜೇತರಾದವರಿಗೆ ಹೊಲಿಗೆ ಯಂತ್ರ, ಮೊಬೈಲ್ ಫೋನ್ ಹಾಗೂ ಸಿನಿಮಾ ಟಿಕೆಟ್ ನೀಡಲಾಗುವುದು ಎಂದಿದೆ.
ಬಹಳ ಮುಖ್ಯವಾಗಿ ರಾಜ್ಯದ್ಯಾಂತ 7 ಸಾವಿರಕ್ಕೂ ಹೆಚ್ಚಿನ ಆಟೋ ಪಬ್ಲಿಸಿಟಿ ಮಾಡುತ್ತಿರುವ ರವಿಕೆಪ್ರಸಂಗ ಚಿತ್ರತಂಡ ಆಟೋ ಡ್ರೈವರ್ಗಳೊಂದಿಗೆ ಒಂದಷ್ಟು ಸಿನಿಮಾದ ಬಗ್ಗೆ ಚರ್ಚಿಸಿ, ಗೀತಾಭಾರತಿ ಭಟ್ ಅವರು ಅನೇಕ ಆಟೋಗಳಿಗೆ ಸ್ಟಿಕ್ಕರ್ ಅಂಟಿಸುವ ಮೂಲಕ ಚಾಲನೆ ನೀಡಿದರು.