ಕರ್ನಾಟಕ

karnataka

ETV Bharat / entertainment

ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ ಚಿತ್ರಕ್ಕೆ ಶಿಮ್ಲಾ ಸುಂದರಿ ರೂಪಾಲಿ ಎಂಟ್ರಿ - roopali sood entry for venkya - ROOPALI SOOD ENTRY FOR VENKYA

ವೆಂಕ್ಯಾ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಶಿಮ್ಲಾ ಬೆಡಗಿ ರೂಪಾಲಿ ಸೂದ್ ಪಾದಾರ್ಪಣೆ ಮಾಡುತ್ತಿದ್ದಾರೆ.

roopali-sood-entry-for-venkya-directed-by-sagar-puranik
ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ ಚಿತ್ರಕ್ಕೆ ಶಿಮ್ಲಾ ಸುಂದರಿ ರೂಪಾಲಿ ಎಂಟ್ರಿ

By ETV Bharat Karnataka Team

Published : Apr 1, 2024, 5:16 PM IST

ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಅವರ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ವೆಂಕ್ಯಾ ಬಳಗಕ್ಕೆ ಯುವ ನಟಿಯೊಬ್ಬರ ಆಗಮನವಾಗಿದೆ. ಶಿಮ್ಲಾ ಸುಂದರಿ ರೂಪಾಲಿ ಸೂದ್ ಚಿತ್ರದಲ್ಲಿ ನಟಿಸ್ತಿದ್ದು, ಈ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಹೌದು, ಮೂಲತಃ ಶಿಮ್ಲಾದವರಾದ ರೂಪಾಲಿ ಕಾಲೇಜು ದಿನಗಳಲ್ಲಿದ್ದಾಗಲೇ ಮಾಡೆಲಿಂಗ್ ಅಖಾಡಕ್ಕೆ ಇಳಿದಿದ್ದರು. ಮಾಡೆಲಿಂಗ್ ಜೊತೆ ಜೊತೆಯಲ್ಲೇ ಹಲವು ಮ್ಯೂಸಿಕ್ ಆಲ್ಬಂಗಳಲ್ಲಿ ನಟಿಸಿರುವ ಶಿಮ್ಲಾ ಚೆಲುವೆ, ಹಾರ್ಡಿ ಸಂಧು ಅವರೊಂದಿಗಿನ ಸೂಪರ್ ಹಿಟ್ ಹಾಡು ‘ಹಾರ್ನ್ ಬ್ಲೋ’ನಲ್ಲಿ ಹೆಜ್ಜೆ ಹಾಕಿದ್ದಾರೆ. ಇದೀಗ ‘ವೆಂಕ್ಯಾ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ ಚಿತ್ರಕ್ಕೆ ಶಿಮ್ಲಾ ಸುಂದರಿ ರೂಪಾಲಿ ಎಂಟ್ರಿ

ರೂಪಾಲಿ ಈಗಾಗಲೇ ‘ವೆಂಕ್ಯಾ’ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಅವರು ಹಿಮಾಚಲದ ಪಹಾಡಿ ಹುಡುಗಿಯಾಗಿ ನಟಿಸುತ್ತಿದ್ದಾರೆ. ಶೂಟಿಂಗ್ ಅನುಭವ ಹಂಚಿಕೊಂಡಿರುವ ರೂಪಾಲಿ, ‘ನಾವು ಇತ್ತೀಚೆಗೆ ಮನಾಲಿಯ ಮುಂದೆ ಕೈಲಾಂಗ್​ನಲ್ಲಿ, ಪರ್ವತಗಳ ನಡುವೆ ಸುಂದರವಾದ ಸ್ಥಳದಲ್ಲಿ ಕೆಲವು ಭಾಗಗಳನ್ನು ಚಿತ್ರೀಕರಿಸಿದ್ದೇವೆ. ಇದು ನನ್ನ ಸಿನಿಮಾ ವೃತ್ತಿಜೀವನಕ್ಕೆ ಅದ್ಭುತ ಆರಂಭ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಡೊಳ್ಳು ಸಿನಿಮಾ ನಿರ್ಮಾಣ ಮಾಡಿದ್ದ ಪವನ್ ಒಡೆಯರ್ ವೆಂಕ್ಯಾನಿಗೂ ಸಾಥ್ ಕೊಟ್ಟಿದ್ದಾರೆ. ಒಡೆಯರ್ ಫಿಲ್ಮ್ಸ್ ನಡಿ ತಯಾರಾಗ್ತಿರುವ ಈ ಚಿತ್ರಕ್ಕೆ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಕೂಡ ಹಣ ಹಾಕಿದ್ದಾರೆ. ಉತ್ತರ ಕರ್ನಾಟಕದ ಕಥೆ ಆಧರಿಸಿ ಮೂಡಿ ಬರುತ್ತಿರುವ ‘ವೆಂಕ್ಯಾ’ ಚಿತ್ರದ ಕಥೆ ಮತ್ತು ಸಂಭಾಷಣೆಯನ್ನು ಶ್ರೀನಿಧಿ ಡಿಎಸ್ ಬರೆದಿದ್ದಾರೆ. ಪ್ರಣವ್ ಮುಲೆ ಛಾಯಾಗ್ರಹಣ ಮತ್ತು ಹೇಮಂತ್ ಜೋಯಿಸ್ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ:'ಮ್ಯಾಟ್ನಿ' ನೋಡಲು ಸ್ನೇಹಿತರ ಜೊತೆಗೂಡಿದ ಸತೀಶ್ ನಿನಾಸಂ - Matney Movie

ABOUT THE AUTHOR

...view details