ಕನ್ನಡ ಚಿತ್ರರಂಗದ ಭರವಸೆಯ ನಟ ರೂಪೇಶ್ ಶೆಟ್ಟಿ ಅಭಿನಯದ 'ಅಧಿಪತ್ರ' ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಫೆಬ್ರವರಿ 7ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಈಗಾಗಲೇ ಘೋಷಿಸಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಅಧಿಪತ್ರದಲ್ಲಿ ಕರಾವಳಿ ಭಾಗದ ಕಥೆಯನ್ನು ಕಟ್ಟಿಕೊಡಲಾಗಿದೆ.
ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತ ಜೊತೆಗೆ ಹೊಸ ರೀತಿಯ ಕಥೆಯನ್ನು ಹೆಣೆಯಲಾಗಿದೆ. ಚಯನ್ ಶೆಟ್ಟಿ ಒಂದೊಳ್ಳೆ ಕಥೆಯ ಜೊತೆಗೆ ಅದ್ಭುತ ಮೇಕಿಂಗ್ ಕೂಡಾ ಮಾಡಿದ್ದಾರೆ. ಕರಾವಳಿ ಭಾಗದಲ್ಲಿಯೇ ಚಿತ್ರೀಕರಣ ಮಾಡಿದ್ದಾರೆ. ಈಗಾಗಲೇ ಚಿತ್ರದ ಡಬ್ಬಿಂಗ್ ಹಾಗೂ ಓಟಿಟಿ ಹಕ್ಕುಗಳಿಗೆ ಬೇಡಿಕೆ ಬಂದಿದೆ.
ರೂಪೇಶ್ ಶೆಟ್ಟಿಗೆ ನಿರೂಪಕಿ ಜಾಹ್ನವಿ ಜೋಡಿ ಆಗಿದ್ದಾರೆ. ಸಿನಿಮಾದಲ್ಲಿ ನುರಿತ ಕಲಾವಿದರೇ ಇದ್ದಾರೆ. ಎಂ. ಕೆ. ಮಠ ಅಭಿನಯಿಸಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ಪ್ರಕಾಶ್ ತುಳುನಾಡು, ರಘು ಪಾಂಡೇಶ್ವರ್, ದೀಪಕ್ ರೈ, ಕಾರ್ತಿಕ್ ಭಟ್, ಅನಿಲ್ ಉಪ್ಪಾಲ್, ಪ್ರಶಾಂತ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.