ಮುಂಬೈ(ಮಹಾರಾಷ್ಟ್ರ): ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯ ಸಮೀಪ ಇತ್ತೀಚಿಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಬಳಿಕ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮಹಾರಾಷ್ಟ್ರ ಸರ್ಕಾರ ವೈ ಪ್ಲಸ್ ವಿಶೇಷ ಭದ್ರತೆ ಒದಗಿಸಿದೆ. ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ನಟ ಕಾಣಿಸಿಕೊಂಡಿದ್ದು, ದುಬೈಗೆ ಪ್ರಯಾಣ ಬೆಳೆಸಿದರು.
ಈ ಕುರಿತ ವಿಡಿಯೋಗಳನ್ನು ಪಾಪರಾಜಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸಲ್ಮಾನ್ ಖಾನ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ವೈಯಕ್ತಿಕ ಭದ್ರತಾ ಸಿಬ್ಬಂದಿಗಳ ಕಣ್ಗಾವಲಿನಲ್ಲಿ ಕೆಲಕಾಲ ಫೋಟೋಗ್ರಾಫರ್ಗಳೊಂದಿಗೆ ಮಾತುಕತೆ ನಡೆಸಿದರು.