ಕರ್ನಾಟಕ

karnataka

ETV Bharat / entertainment

'ಶ್..ಅಂದಿನಿಂದಲೂ ನನಗೆ ಉಪೇಂದ್ರ ಅಂದ್ರೆ ವಿಶೇಷ ಪ್ರೀತಿ': ಶಿವರಾಜ್​ಕುಮಾರ್​ - UI PRE RELEASE EVENT

'ಯುಐ' ಚಿತ್ರದ ಪ್ರೀ ರಿಲೀಸ್ ಈವೆಂಟ್ ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.

'UI' Pre-release event
'ಯುಐ' ಚಿತ್ರದ ಪ್ರೀ ರಿಲೀಸ್ ಈವೆಂಟ್ (Photo: ETV Bharat)

By ETV Bharat Karnataka Team

Published : Dec 17, 2024, 7:51 PM IST

ಬುದ್ಧಿವಂತ ನಟ-ನಿರ್ದೇಶಕ ಖ್ಯಾತಿಯ ಉಪೇಂದ್ರ ಸಾರಥ್ಯದ ಬಹುನಿರೀಕ್ಷಿತ 'ಯುಐ' ಚಿತ್ರದ ಪ್ರೀ ರಿಲೀಸ್ ಈವೆಂಟ್ ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ವರ್ಣರಂಜಿತ ಸಮಾರಂಭದಲ್ಲಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

ಜಿ.ಮನೋಹರನ್ ಮತ್ತು ಕೆ.ಪಿ. ಶ್ರೀಕಾಂತ್ ನಿರ್ಮಿಸಿರುವ ಚಿತ್ರವಿದು. ಏಳೆಂಟು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ "ಯು ಐ" ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ನಟರಾಕ್ಷಸ ಡಾಲಿ ಧನಂಜಯ್, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ ಉದಯ್ ಕೆ ಮೆಹ್ತಾ, ರಮೇಶ್ ರೆಡ್ಡಿ, ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ಜಗದೀಶ್, ನಿರ್ದೇಶಕರಾದ ಪವನ್ ಒಡೆಯರ್, ಡಾ. ಸೂರಿ, ವೀರೇಶ್ ಚಿತ್ರಮಂದಿರದ ಕುಶಾಲ್ ಸೇರಿದಂತೆ ಮೊದಲಾದ ಸಾಕ್ಷಿಯಾಗಿ ಸಿನಿಮಾ ಯಶಸ್ಸಿಗೆ ಶುಭ ಕೋರಿದರು.

'ಯುಐ' ಚಿತ್ರದ ಪ್ರೀ ರಿಲೀಸ್ ಈವೆಂಟ್ (Photo: ETV Bharat)

ಶಿವರಾಜಕುಮಾರ್ ಮಾತನಾಡಿ, ನಾನು "ಶ್" ಚಿತ್ರದ ಪ್ರೀಮಿಯರ್ ಶೋ ಅನ್ನು ಪಲ್ಲವಿ ಚಿತ್ರಮಂದಿರದಲ್ಲಿ ನೋಡಿದ್ದೆ. ಆನಂತರ "ಓಂ" ಚಿತ್ರದ ಚಿತ್ರೀಕರಣ ಸಮಯದಲ್ಲಿ ಉಪೇಂದ್ರ ಅವರ ಕಾರ್ಯವೈಖರಿ ನೋಡಿ, ನೀವು ಭಾರತೀಯ ಚಿತ್ರರಂಗದ ಮಹಾನ್ ನಿರ್ದೇಶಕರಲ್ಲೊಬ್ಬರಾಗುತ್ತೀರ ಎಂದು ಹೇಳಿದ್ದೆ. ಆಗಿನಿಂದಲೂ ನನಗೆ ಉಪೇಂದ್ರ ಅವರನ್ನು ಕಂಡರೆ ವಿಶೇಷ ಪ್ರೀತಿ. ನಾನು ಕೂಡಾ ಈ ಸಿನಿಮಾ ನೋಡುವ ಕಾತುರದಲ್ಲಿದ್ದೇನೆ ಎಂದು ತಿಳಿಸಿದರು.

'ಯುಐ' ಚಿತ್ರದ ಪ್ರೀ ರಿಲೀಸ್ ಈವೆಂಟ್ (Photo: ETV Bharat)

ನಾವು ಉಪೇಂದ್ರ ಅವರ ನಿರ್ದೇಶನಕ್ಕೆ ಅಭಿಮಾನಿಗಳು. ಅವರ ಚಿತ್ರಗಳನ್ನು ನೋಡಿ ಬೆಳೆದವರು ನಾವು. ಒಂಭತ್ತು ವರ್ಷಗಳ ನಂತರ ಉಪೇಂದ್ರ ಅವರು ನಿರ್ದೇಶಿಸಿರುವ ಈ ಚಿತ್ರವನ್ನು ನೋಡಲು ಕಾಯುತ್ತಿರುವುದಾಗಿ ದುನಿಯಾ ವಿಜಯ್ ಹಾಗೂ ಡಾಲಿ ಧನಂಜಯ್ ಹೇಳಿದರು.

'ಯುಐ' ಚಿತ್ರದ ಪ್ರೀ ರಿಲೀಸ್ ಈವೆಂಟ್ (Photo: ETV Bharat)

ಇಂದು ನಮ್ಮ ಚಿತ್ರಕ್ಕೆ ಪ್ರೋತ್ಸಾಹ ನೀಡಲು ಬಂದಿರುವ ಶಿವಣ್ಣ, ವಿಜಯ್, ಧನಂಜಯ್ ಸೇರಿದಂತೆ ಎಲ್ಲಾ ಗಣ್ಯರಿಗೆ ಧನ್ಯವಾದ ಅರ್ಪಿಸಿ ಮಾತನಾಡಿದ ನಾಯಕ ಹಾಗೂ ನಿರ್ದೇಶಕ ಉಪೇಂದ್ರ. ಈ ಚಿತ್ರ ಆರಂಭವಾಗಲು ಕಾರಣ ಕೆ.ಪಿ. ಶ್ರೀಕಾಂತ್. 50 ವರ್ಷಗಳ ಇತಿಹಾಸವಿರುವ ಲಹರಿ ಸಂಸ್ಥೆ ಈ ಚಿತ್ರ ನಿರ್ಮಾಣ ಮಾಡಿದ್ದು, ಮನೋಹರನ್ ಹಾಗೂ ಶ್ರೀಕಾಂತ್ ಅವರು ನಿರ್ಮಾಪಕರಾಗಿದ್ದಾರೆ. ನವೀನ್, ಲಹರಿ ವೇಲು, ನಾಗೇಂದ್ರ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಇದು ನನ್ನೊಬ್ಬನ ಚಿತ್ರವಲ್ಲ. ನನ್ನ ತಂಡದ ಚಿತ್ರ. ಈ ಚಿತ್ರ ಉತ್ತಮವಾಗಿ ಮೂಡಿಬರಲು ಇವರೆಲ್ಲರ ಸಹಕಾರವೇ ಕಾರಣ. ಈ ಸಮಯದಲ್ಲಿ ಚಿತ್ರತಂಡದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಇದೇ ಡಿಸೆಂಬರ್ 20ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಎಂದರು.

ಇದನ್ನೂ ಓದಿ:ಶಾಲೆ ಪ್ರಾರಂಭಿಸುತ್ತಿರುವ ಅಶ್ವಿನಿ: 20 ವರ್ಷಗಳ ಬಳಿಕ ನನಸಾಯ್ತು ಅಪ್ಪು​ ಕನಸು

ಸಮಾರಂಭಕ್ಕೆ ಆಗಮಿಸಿರುವ ಎಲ್ಲಾ ಗಣ್ಯರಿಗೂ ಹಾಗೂ ಚಿತ್ರತಂಡದವರಿಗೆ ಧನ್ಯವಾದ. ಇದೇ 20 ವಿಶ್ವದಾದ್ಯಂತ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ "UI" ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಆಲ್ ಮೋಸ್ಟ್ ಫುಲ್ ಆಗಿದೆ. ಆರಂಭದಲ್ಲೇ ನಮ್ಮ ಚಿತ್ರಕ್ಕೆ ಸಿಗುತ್ತಿರುವ ಬೆಂಬಲಕ್ಕೆ ಮನ ತುಂಬಿ ಬಂದಿದೆ ಎಂದರು ನಿರ್ಮಾಪಕ ಕೆ.ಪಿ. ಶ್ರೀಕಾಂತ್ ಹಾಗೂ ಸಹ ನಿರ್ಮಾಪಕ ನವೀನ್.

'ಯುಐ' ಚಿತ್ರದ ಪ್ರೀ ರಿಲೀಸ್ ಈವೆಂಟ್ (Photo: ETV Bharat)

ಇದನ್ನೂ ಓದಿ:Watch: ವಿದೇಶದಲ್ಲೂ 'ಯು ಐ' ಹವಾ: 24 ಗಂಟೆಯಲ್ಲಿ ಖರೀದಿಯಾದ ಟಿಕೆಟ್​ ಎಷ್ಟು ಗೊತ್ತಾ?

ಕಾರ್ಯಕ್ರಮದಲ್ಲಿ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ, ಕಲಾವಿದರಾದ ರವಿಶಂಕರ್, ಸುಧೀ, ನಿಧಿ ಸುಬ್ಬಯ್ಯ, ನೀತು, ಕಾರ್ಯಕಾರಿ ನಿರ್ಮಾಪಕ ಲಹರಿ ವೇಲು ಹಾಗೂ ವಿತರರಕರಾದ ಕೆ.ವಿ. ಎನ್ ಸಂಸ್ಥೆಯ ಸುಪ್ರೀತ್ ಸೇರಿ ಹಲವರು "UI" ಕುರಿತು ಮಾತನಾಡಿದರು.

ABOUT THE AUTHOR

...view details