ಕರ್ನಾಟಕ

karnataka

ETV Bharat / entertainment

ಮೊದಲ ಹಂತದ ಶೂಟಿಂಗ್ ಮುಗಿಸಿದ 'ಶಭ್ಬಾಷ್‍' ಚಿತ್ರತಂಡ

ಶಭ್ಬಾಷ್‍ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.

Shabbhash
ಶಭ್ಬಾಷ್‍

By ETV Bharat Karnataka Team

Published : Feb 9, 2024, 4:22 PM IST

ಮಳೆಬಿಲ್ಲು ಸಿನಿಮಾ ಮೂಲಕ ಗಮನ ಸೆಳೆದಿರುವ ಯುವಪ್ರತಿಭೆ ಶರತ್ ಅಭಿನಯದ ಮತ್ತು ನಿರ್ದೇಶಕ ರುದ್ರಶಿವ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ 'ಶಭ್ಭಾಷ್'. ಸಂಕ್ರಾಂತಿ ಶುಭ ಸಂದರ್ಭದಲ್ಲಿ ಸೆಟ್ಟೇರಿದ ಶಭ್ಬಾಷ್ ಚಿತ್ರೀಕರಣ ಭರದಿಂದ ಸಾಗಿದೆ. ಚಿತ್ರತಂಡದವರು ಬಹಳ ಉತ್ಸಾಹದಿಂದ ಶೂಟಿಂಗ್​ನಲ್ಲಿ ಭಾಗಿಯಾಗಿದ್ದು, ಮೊದಲ ಹಂತದ ಚಿತ್ರೀಕರಣ ಮುಗಿಸಿದೆ.

ನಿರ್ದೇಶಕ ರುದ್ರಶಿವ ಯೋಜನೆಯಂತೆ, ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಏಳು ದಿನಗಳ ಚಿತ್ರೀಕರಣ ಮುಗಿಸಿಕೊಂಡು, ಚನ್ನಗಿರಿಯ ಶಾಂತಿಸಾಗರದ ಪ್ರದೇಶದಲ್ಲಿ ಚಿತ್ರೀಕರಣ ನಡೆಸಿದ್ದಾರೆ. ಅಲ್ಲಿನ ಪೌರಾಣಿಕ, ಐತಿಹಾಸಿಕ ಸ್ಥಳಗಳಲ್ಲಿ ಈ ಚಿತ್ರದ ಚಿತ್ರೀಕರಣ ಮಾಡಲಾಗಿದೆ.

ಶಭ್ಬಾಷ್‍

ಸೇತುವೆ ಮೇಲೆ ಶೂಟಿಂಗ್​​: ಚನ್ನಗಿರಿಯ ಶಾಂತಿಸಾಗರ ಸೂಳೆಕೆರೆ ಅಂತಲೂ ಕರೆಸಿಕೊಳ್ಳುತ್ತದೆ. ಏಷ್ಯಾ ಖಂಡದಲ್ಲಿಯೇ ಎರಡನೇ ಅತಿ ದೊಡ್ಡ ಕೆರೆ ಎಂಬ ಹೆಗ್ಗಳಿಕೆಯೂ ಶಾಂತಿಸಾಗರಕ್ಕಿದೆ. ಈ ಕೆರೆಗೂ ಹನ್ನೆರಡನೇ ಶತಮಾನಕ್ಕೂ ಎಂದಿಗೂ ಸಡಿಲವಾಗದಂಥ ಕೊಂಡಿಗಳಿವೆ. ಸ್ವರ್ಗಾವತಿ ಪಟ್ಟಣದ ದೊರೆ ವಿಕ್ರಮರಾಜನ ಸುಪುತ್ರಿ ಶಾಂತವ್ವ ತನಗಾದ ಅವಮಾನಕ್ಕೆ ಪ್ರತಿಭಟನೆಯ ಸ್ವರೂಪದಲ್ಲಿ ಈ ಬೃಹತ್ ಕೆರೆಯನ್ನು ಸೃಷ್ಟಿಸಿದಳೆಂಬ ಪ್ರತೀತಿ ಇದೆ. ಇದರ ಜೊತೆಗೆ ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಿಸಿರುವ ಸೇತುವೆಯೊಂದು ಪ್ರಧಾನ ಆಕರ್ಷಣೆ. ಎರಡು ಬೆಟ್ಟಗಳನ್ನು ಸೇರಿಸಿ ಈ ಸೇತುವೆ ಕಟ್ಟಿಸಲಾಗಿದೆ. ಇಂದಿಗೂ ಅಚ್ಚರಿಯಾಗಿ ಕಾಣಿಸುವ ಈ ಸೇತುವೆಯ ಮೇಲೆ ಶಭ್ಬಾಷ್ ಚಿತ್ರೀಕರಣ ನಡೆಸಲಾಗಿದೆ. ಅತ್ಯಂತ ಎತ್ತರದ ಪ್ರದೇಶದಲ್ಲಿರುವ ಆ ಸೇತುವೆ ಮೇಲೆ ಚಿತ್ರೀಕರಣ ನಡೆಸುವುದು ಸಾಹಸವೇ ಸರಿ. ಕೆಲವೇ ಕೆಲ ಕಲಾವಿದರು, ತಂತ್ರಜ್ಞರು ಮಾತ್ರವೇ ಅಲ್ಲಿಗೆ ತಲುಪಲು ಸಾಧ್ಯವಾಗಿತ್ತು.

ಇದನ್ನೂ ಓದಿ:ರಜನಿಕಾಂತ್ ನಟನೆಯ 'ಲಾಲ್ ಸಲಾಂ' ಬಿಡುಗಡೆ: ಮೊದಲ ದಿನದ ಕಲೆಕ್ಷನ್​​ ಎಷ್ಟು?

ಸಿನಿಮಾದ ಶೂಟಿಂಗ್​​ ನಿರ್ದೇಶಕ ರುದ್ರಶಿವ ಸೇರಿದಂತೆ ಚಿತ್ರತಂಡದ ಪಾಲಿಗೆ ಅಮೋಘ ಅನುಭವವನ್ನು ತುಂಬಿದೆ. ಛಾಯಾಗ್ರಾಹಕರು, ಕಲಾವಿದರು, ತಾಂತ್ರಿಕ ವರ್ಗದವರು ಸೇರಿ ಈ ಭಾಗದಲ್ಲಿರುವ ಪ್ರಸಿದ್ಧ ದೇವಾಲಯ, ಹಳ್ಳಿಗಳಲ್ಲಿ ನಾಯಕ ನಾಯಕಿಯ ಚಿತ್ರೀಕರಣ ನಡೆಸಿದ್ದಾರೆ. ಇಂಥದ್ದೊಂದು ಸುಂದರ ವಾತಾವರಣದಲ್ಲಿ ಮೊದಲನೇ ಹಂತದ ಚಿತ್ರೀಕರಣವನ್ನು ಮುಗಿಸಿಕೊಳ್ಳಲಾಗಿದೆ.

ಇದನ್ನೂ ಓದಿ:ತೀರದಾಚೆಗೆ ಹಾರಿ ಹೋಗುವಾಸೆ: ಪ್ರೇಕ್ಷಕರ ಮನಸೆಳೆದ 'ಸಾರಾಂಶ' ಸಾಂಗ್​​

ಶಭ್ಬಾಷ್ ಆ್ಯಕ್ಷನ್ ಡ್ರಾಮಾ ಜಾನರ್​​ನ ಸಿನಿಮಾ. ಓಂ ಸಾಯಿ ಪ್ರಕಾಶ್ ಸೇರಿದಂತೆ ಘಟಾನುಘಟಿ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರುವ ರುದ್ರಶಿವ ನಿರ್ದೇಶನದ ಚೊಚ್ಚಲ ಚಿತ್ರವಿದು. ಪವೀಂದ್ರ ಮುತ್ತಪ್ಪ ಈ ಚಿತ್ರವನ್ನು ಏಸ್ 22 (ACE 22) ಬ್ಯಾನರ್​ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಸದ್ಯ ಮೊದಲ ಹಂತದ ಚಿತ್ರೀಕರಣ ಮುಗಿಸಿರೋ ಶಭ್ಭಾಷ್ ಚಿತ್ರತಂಡ ಅದಷ್ಟು ಬೇಗ ಶೂಟಿಂಗ್ ಮುಗಿಸಿ ಟ್ರೇಲರ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ABOUT THE AUTHOR

...view details