ಬಿಗ್ ಬಾಸ್ ಜನಪ್ರಿಯತೆಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಟನೆಯ 'ಜಸ್ಟ್ ಮ್ಯಾರೀಡ್' ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿ ಜನಮನ ಗೆದ್ದಿರುವ ಅಜನೀಶ್ ಲೋಕನಾಥ್ ಈ ಮೂಲಕ ನಿರ್ಮಾಪಕರಾಗಿದ್ದಾರೆ. ಇಷ್ಟು ದಿನ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಸಿ.ಆರ್.ಬಾಬಿ ನಿರ್ದೇಶಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.
ಚಿತ್ರದಲ್ಲಿ 6 ಹಾಡುಗಳಿವೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಈ ಪೈಕಿ ಪ್ರಮೋದ್ ಮರವಂತೆ ಬರೆದು, ವಿಜಯ್ ಪ್ರಕಾಶ್ ಹಾಡಿರುವ 'ಅಭಿಮಾನಿಯಾಗಿ ಹೋದೆ' ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಂಡಿದೆ. ಸಿ.ಆರ್.ಬಾಬಿ ಹಾಗೂ ಧನಂಜಯ್ ರಂಜನ್ ಚಿತ್ರಕಥೆ ಬರೆದಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ನೀಡಿದ್ದಾರೆ.
ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ ಅನಿಲ್, ಕುಮುದಾ, ಜಯರಾಮ್, ವೇದಿಕಾ ಕಾರ್ಕಳ್ ಮುಂತಾದವರು ತಾರಾಬಳಗದಲ್ಲಿದ್ದಾರೆ.