ಹೈದರಾಬಾದ್: ಇತ್ತೀಚೆಗಷ್ಟೇ ಚಿತ್ರಮಂದಿರ ಪ್ರವೇಶಿಸಿ ಅದ್ಭುತ ಪ್ರದರ್ಶನ ಕಾಣುತ್ತಿರುವ 'ಸ್ತ್ರೀ 2' ಸಿನಿಮಾದ ಯಶಸ್ಸಿನಲೆಯಲ್ಲಿ ತೇಲುತ್ತಿರುವ ಬಾಲಿವುಡ್ ಬ್ಯೂಟಿ ಶ್ರದ್ಧಾ ಕಪೂರ್ ಹೊಸದೊಂದು ದಾಖಲೆ ಬರೆದಿದ್ದಾರೆ. ಇನ್‌ಸ್ಟಾಗ್ರಾಮ್ ಹೈಯೆಸ್ಟ್ ಫಾಲೋವರ್ಸ್ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಂದಿಕ್ಕಿದ್ದಾರೆ.
ಮೂರನೇ ಭಾರತೀಯ;ಕ್ರಿಕೆಟ್ ಲೆಜೆಂಡ್ ವಿರಾಟ್ ಕೊಹ್ಲಿ ಹಾಗೂ ಗ್ಲೋಬಲ್ ಐಕಾನ್ ಪ್ರಿಯಾಂಕಾ ಚೋಪ್ರಾ ಅವರ ನಂತರದ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಜನಪ್ರಿಯ ಸೋಷಿಯಲ್ ಮೀಡಿಯಾ ಪ್ಲ್ಯಾಟ್ಫಾರ್ಮ್ ಇನ್ಸ್ಟಾಗ್ರಾಮ್ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಮೂರನೇ ಭಾರತೀಯರಾಗಿ ಹೊರಹೊಮ್ಮಿದ್ದಾರೆ. ಈ ವಿಷಯ ತಿಳಿದ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಎಕ್ಸ್ ಖಾತೆಯಲ್ಲಿ ಮೋದಿ ಮುಂದು: ಹಲವು ಯಶಸ್ವಿ ಚಿತ್ರಗಳನ್ನು ಮನರಂಜನಾ ಕ್ಷೇತ್ರಕ್ಕೆ ಕೊಟ್ಟಿರುವ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಇನ್ಸ್ಟಾಗ್ರಾಮ್ನಲ್ಲಿ 91.4 ಮಿಲಿಯನ್ ಫಾಲೋವರ್ಗಳನ್ನು ಸಂಪಾದಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು 91.3 ಮಿಲಿಯನ್ ಫಾಲೋವರ್ಗಳನ್ನು ಹೊಂದಿದ್ದು, ಅವರಿಗಿಂತ ಒಂದು ಹೆಜ್ಜೆ ಮುಂದಿದ್ದಾರೆ. ಕುತೂಹಲಕಾರಿಯಾಗಿ, ನಟಿ ಇನ್ಸ್ಟಾಗ್ರಾಮ್ನಲ್ಲಿ ಮುಂದೆ ಹೋಗುತ್ತಿದ್ದರೂ ಕೂಡಾ ಮೋದಿ ಅವರು 101.2 ಮಿಲಿಯನ್ ಫಾಲೋವರ್ಗಳೊಂದಿಗೆ ಮತ್ತೊಂದು ಜನಪ್ರಿಯ ಸೋಷಿಯಲ್ ಮೀಡಿಯಾ ಪ್ಲ್ಯಾಟ್ಪಾರ್ಮ್ ಎಕ್ಸ್ (ಟ್ವಿಟರ್) ನಲ್ಲಿ ಹೆಚ್ಚು ಅನುಸರಿಸಲ್ಪಡುವ ಗ್ಲೋಬಲ್ ಲೀಡರ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಇದು ಡಿಜಿಟಲ್ ವೇದಿಕೆಯಲ್ಲಿನ ಅವರ ಪ್ರಭಾವವನ್ನು ಒತ್ತಿ ಹೇಳುತ್ತಿದೆ.