ತಮಿಳಿನಲ್ಲಿ 90ರ ದಶಕದಲ್ಲಿ ಸೂರ್ಯನ್, ಐ ಲವ್ ಇಂಡಿಯಾ, ಇಂದು, ಕಲ್ಲೂರಿ ವಾಸಲ್ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ಪವಿತ್ರನ್ ಅವರೀಗ ಕನ್ನಡದಲ್ಲಿ 'ಕರ್ಕಿ' ಎಂಬ ಸಿನಿಮಾ ಮಾಡಿ ಮುಗಿಸಿದ್ದಾರೆ. ಈಗಾಗಲೇ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಆಡಿಯೋ ಅನಾವರಣಗೊಳಿಸಿದೆ.
ಸಂಗೀತ ನಿರ್ದೇಶಕ, ಸಾಹಿತಿ ಕೆ.ಕಲ್ಯಾಣ್, ಚಿತ್ರ ಸಾಹಿತಿ ಕವಿರಾಜ್, ನಟಿ ಸಾತ್ವಿಕಾ, ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ.ವಿಶ್ವನಾಥ್, ಬಾ.ಮ.ಹರೀಶ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಮತ್ತು ಚಿತ್ರತಂಡದ ಸದಸ್ಯರು ಆಡಿಯೋ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿಯಾಗಿ ಕರ್ಕಿಯ ಹಾಡುಗಳನ್ನು ಅನಾವರಣಗೊಳಿಸಿದರು.
'ಕರ್ಕಿ' ಸಿನಿಮಾದ ಪ್ರಮೋಶನಲ್ ಈವೆಂಟ್ (ETV Bharat) ಈ ಹಿಂದೆ ವಾಟ್ಸ್‌ಆ್ಯಪ್ ಲವ್, ರಾಜರಾಣಿ ಚಿತ್ರಗಳ ಮೂಲಕ ಗಮನ ಸೆಳೆದಿರುವ ಜಯಪ್ರಕಾಶ್ (ಜೆ.ಪಿ) ರೆಡ್ಡಿ ಮಾತನಾಡಿ, ಕಾನೂನು ಪದವಿಧರನಾಗಬೇಕು ಎಂಬ ಕನಸಿರುವ ಹಳ್ಳಿ ಹುಡುಗನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರದಲ್ಲಿ ನನ್ನದು ಮುತ್ತುರಾಜ್ ಎಂಬ ಹಳ್ಳಿ ಹುಡುಗನ ಪಾತ್ರ. ಜಾತಿ ಮತ್ತು ಜನಾಂಗೀಯ ವಿಷಯವನ್ನು ಮನಮುಟ್ಟುವಂತೆ ಇಲ್ಲಿ ಹೇಳಲಾಗಿದೆ. ಸ್ನೇಹ, ಪ್ರೀತಿ, ಪ್ರೇಮ ಮತ್ತು ಮಾನವೀಯತೆಯ ಅಂಶಗಳ ಸುತ್ತ ಸಿನಿಮಾ ಸಾಗುತ್ತದೆ. ಆದಷ್ಟು ನೈಜವಾಗಿ ಕಥೆ, ಪಾತ್ರಗಳು ಮೂಡಿಬಂದಿದೆ ಎಂದು ತಿಳಿಸಿದ್ದರು.
'ಕರ್ಕಿ' ಸಿನಿಮಾದ ಪ್ರಮೋಶನಲ್ ಈವೆಂಟ್ (ETV Bharat) ಕರ್ಕಿ ಚಿತ್ರಕ್ಕೆ ಆರು ಹಾಡುಗಳನ್ನು ಬರೆದಿರುವ ಗೀತೆರಚನೆಕಾರ ಕವಿರಾಜ್ ಮಾತನಾಡಿ, ''ಕರ್ಕಿ ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಈ ಸಿನಿಮಾದಲ್ಲಿ ಬೇರೆ ಬೇರೆ ಶೈಲಿಯ ಆರು ಹಾಡುಗಳಿದ್ದು, ಈ ಎಲ್ಲಾ ಹಾಡುಗಳಿಗೆ ಸಾಹಿತ್ಯ ಬರೆದಿದ್ದೇನೆ. ತಮಿಳಿನ ಹಿರಿಯ ಮತ್ತು ಅನುಭವಿ ನಿರ್ದೇಶಕ ಪವಿತ್ರನ್ ಅವರು ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಈ ಸಿನಿಮಾದ ಎಲ್ಲಾ ಹಾಡುಗಳಿಗೆ ಸಾಹಿತ್ಯ ಬರೆಯಲು ಅವಕಾಶ ಸಿಕ್ಕಿದೆ. ಪ್ರತೀ ಹಾಡಿನ ಒಂದೊಂದು ಪದವನ್ನೂ ಅವರೂ ಅರ್ಥೈಸಿಕೊಂಡು, ಸ್ಪಂದಿಸುತ್ತಿದ್ದರು. ನಮ್ಮ ನಡುವಿನ ಕಥೆಯೊಂದು ಹೊಸ ರೀತಿಯಲ್ಲಿ ಮೂಡಿಬಂದಿದ್ದು, ಕರ್ಕಿ ನೋಡುಗರಿಗೆ ಹೊಸ ಅನುಭವ ಕೊಡಲಿದೆ'' ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡರು.
'ಕರ್ಕಿ' ಸಿನಿಮಾದ ಪ್ರಮೋಶನಲ್ ಈವೆಂಟ್ (ETV Bharat) ನಿರ್ದೇಶಕ ಪವಿತ್ರನ್ ಮಾತನಾಡಿ, ಕರ್ಕಿ ಸಿನಿಮಾ ಕನ್ನಡಿಗರಿಗೆ ಹೊಸಥರದ ಅನುಭವ ನೀಡುವ ಸಿನಿಮಾ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. "ಇದು ಕನ್ನಡ ಚಿತ್ರ ಪ್ರೇಕ್ಷಕರಿಗೆ ಖಂಡಿತವಾಗಿಯೂ ಮನಮುಟ್ಟುವ ಸಿನಿಮಾವಾಗಲಿದೆ. ನಮ್ಮ ನಡುವೆಯೇ ನಡೆಯುವ ನೈಜ ಕಥೆಯನ್ನು ಈ ಸಿನಿಮಾ ಮೂಲಕ ಹೇಳುತ್ತಿದ್ದೇವೆ. ಯಾವುದನ್ನೂ ವೈಭವೀಕರಿಸದೇ, ನೈಜವಾಗಿ ಎಲ್ಲವನ್ನೂ ಪ್ರೇಕ್ಷಕರ ಮುಂದಿಡುವ ಕೆಲಸ ಮಾಡಿದ್ದೇವೆ. ನಮ್ಮ ಪ್ರಯತ್ನಕ್ಕೆ ಪ್ರೇಕ್ಷಕರು ಬೆಂಬಲಿಸುತ್ತಾರೆ ಎಂಬ ನಂಬಿಕೆಯಿದೆ" ಎಂದು ಹೇಳಿದರು.
'ಕರ್ಕಿ' ಸಿನಿಮಾ ಸೀನ್ (ETV Bharat) ಇನ್ನೂ ಕರ್ಕಿ ಸಿನಿಮಾದಲ್ಲಿ ನಾಯಕಿಯಾಗಿ ಮಲಯಾಳಿ ಬೆಡಗಿ ಮೀನಾಕ್ಷಿ ನಟಿಸಿದ್ದಾರೆ. ಮೀನಾಕ್ಷಿ ಅವರಿಗಿದು ಮೊದಲ ಕನ್ನಡ ಸಿನಿಮಾ. ಮೀನಾಕ್ಷಿ ಅವರದ್ದು ಶ್ರೀಮಂತ ಕುಟುಂಬದ, ಮೇಲ್ವರ್ಗದ ಹುಡುಗಿಯ ಪಾತ್ರ. ತಮ್ಮ ಪಾತ್ರದ ಬಗ್ಗೆ ಮಾತನಾಡಿರುವ ಅವರು, "ನನ್ನ ಮೊದಲ ಕನ್ನಡ ಸಿನಿಮಾದಲ್ಲೇ ಒಳ್ಳೆಯ ಪಾತ್ರ ಸಿಕ್ಕಿದೆ. ನೈಜತೆಗೆ ಹತ್ತಿರವಿರುವಂತ ಪಾತ್ರ ಇದಾಗಿದೆ. ಅಪ್ಪಟ ಕನ್ನಡ ಹುಡುಗಿಯ ಪಾತ್ರ ನಿರ್ವಹಿಸಿರುವುದಕ್ಕೆ ಖುಷಿಯಿದೆ. ಪ್ರತಿಯೊಬ್ಬ ನೋಡುಗರಿಗೂ ನನ್ನ ಪಾತ್ರ ಇಷ್ಟವಾಗಲಿದೆ" ಎಂಬ ವಿಶ್ವಾಸ ವ್ಯಕ್ತಪಡಿಸಿದರು.
'ಕರ್ಕಿ' ಸಿನಿಮಾ ಸೀನ್ (ETV Bharat) ಈಗಾಗಲೇ ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಿಸಿರುವ ವಿತರಕ ಮತ್ತು ಉದ್ಯಮಿ ಪ್ರಕಾಶ್ ಪಳನಿ ಅವರು ಕರ್ಕಿ ಚಿತ್ರವನ್ನು ನಿರ್ಮಿಸಿದ್ದಾರೆ. ತಮ್ಮ ನಿರ್ಮಾಣದ ಚೊಚ್ಚಲ ಚಿತ್ರದ ಬಗ್ಗೆ ಮಾತನಾಡಿರುವ ಅವರು, "ಸಿನಿಮಾದ ಕಥೆ ಇಷ್ಟವಾಗಿ ನಿರ್ಮಿಸಲು ಮುಂದಾದೆ. ಈ ಸಿನಿಮಾವನ್ನು ಮೊದಲು ಕನ್ನಡದ ದೊಡ್ಡ ನಿರ್ದೇಶಕರೊಬ್ಬರು ಮಾಡಬೇಕಿತ್ತು. ಕಾರಣಾಂತರಗಳಿಂದ ಅವರು ನಿರ್ದೇಶನ ಮಾಡಲಾಗಲಿಲ್ಲ. ಅವರ ಬದಲಾಗಿ ತಮಿಳು ನಿರ್ದೇಶಕ ಪವಿತ್ರನ್ ಈ ಸಿನಿಮಾವನ್ನು ನಿರ್ದೇಶಿಸಿದರು. ಅವರ ನಿರ್ದೇಶನದಲ್ಲಿ ಕರ್ಕಿ ಬಹಳ ಚೆನ್ನಾಗಿ ಮೂಡಿಬಂದಿದೆ. ಈಗಾಗಲೇ ಬಹುತೇಕ ಕೆಲಸಗಳು ಮುಗಿದಿದ್ದು, ಇದೇ ಸೆಪ್ಟೆಂಬರ್ ಅಂತ್ಯದೊಳಗೆ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ" ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ವಿಚ್ಛೇದನ ಘೋಷಿಸಿದ ತಮಿಳಿನ ಜನಪ್ರಿಯ ನಟ ಜಯಂ ರವಿ: ಆರತಿ ಜೊತೆಗಿನ 15 ವರ್ಷಗಳ ದಾಂಪತ್ಯಕ್ಕೆ ವಿರಾಮ - Jayam Ravi Aarti Divorce
ಚಿತ್ರದಲ್ಲಿ ಜಯಪ್ರಕಾಶ್ ಜೋಡಿಯಾಗಿ ಮಲಯಾಳಿ ಬೆಡಗಿ ಮೀನಾಕ್ಷಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸಾಧು ಕೋಕಿಲ, ಬಲ ರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ, ಸ್ವಾತಿ, ಸವಿತಾ ಮೊದಲಾದವರು ಅಭಿನಯಿಸಿದ್ದಾರೆ. ಚಿತ್ರಕ್ಕೆ ಹೃಷಿಕೇಶ ಛಾಯಾಗ್ರಹಣ, ಕ್ರೇಜಿಮೈಂಡ್ಸ್ ಶ್ರೀ ಸಂಕಲನ, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಒಟ್ಟಾರೆ ಬೃಹತ್ ಕಲಾವಿದರ ತಾರಾಗಣ, ನುರಿತ ತಂತ್ರಜ್ಞರ ದಂಡೇ ಈ ಸಿನಿಮಾದಲ್ಲಿದೆ.
'ಕರ್ಕಿ' ಸಿನಿಮಾದ ಪ್ರಮೋಶನಲ್ ಈವೆಂಟ್ (ETV Bharat) ಇದನ್ನೂ ಓದಿ:ತೆರೆಮೇಲೆ ಬರಲಿದೆ ಪೂರ್ಣಚಂದ್ರ ತೇಜಸ್ವಿಯವರ 'ಜುಗಾರಿ ಕ್ರಾಸ್': ಗುರುದತ್ ಗಾಣಿಗ ನಿರ್ದೇಶನ - Jugari Cross
ಕರ್ಕಿ ಸಿನಿಮಾ ಹಿಂದಿಯಲ್ಲಿ ಧಡಕ್ 2 ಎಂಬ ಹೆಸರಿನಲ್ಲಿ ತೆರೆಗೆ ಬರುತ್ತಿದ್ದು, ಈ ಸಿನಿಮಾವನ್ನು ಕರಣ್ ಜೋಹರ್ ನಿರ್ಮಿಸಿ, ಬಾಲಿವುಡ್ನಲ್ಲಿ ತೆರೆಗೆ ತರುತ್ತಿದ್ದಾರೆ. ಆ ಸಿನಿಮಾ ನವೆಂಬರ್ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ. ಸದ್ಯ ತನ್ನ ಟೀಸರ್ ಮತ್ತ ಟ್ರೇಲರ್ ಮೂಲಕ ಸ್ಯಾಂಡಲ್ವುಡ್ ಅಂಗಳದಲ್ಲಿ ಒಂದಷ್ಟು ಸೌಂಡ್ ಮಾಡುತ್ತಿರುವ ಕರ್ಕಿ ಅಬ್ಬರ ತೆರೆಮೇಲೆ ಹೇಗಿರಲಿದೆ ಎಂಬುದು ಇದೇ ತಿಂಗಳಾಂತ್ಯಕ್ಕೆ ಗೊತ್ತಾಗಲಿದೆ.