ಕರ್ನಾಟಕ

karnataka

ETV Bharat / entertainment

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ 'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರದಾನ

ಹಿರಿಯ ನಟ ಹಾಗೂ ರಾಜಕಾರಣಿ ಮಿಥುನ್ ಚಕ್ರವರ್ತಿ ಪ್ರತಿಷ್ಠಿತ 'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿ ಸ್ವೀಕರಿಸಿದ್ದಾರೆ.

Mithun Chakraborty
ಮಿಥುನ್ ಚಕ್ರವರ್ತಿ (IANS)

By ETV Bharat Entertainment Team

Published : Oct 8, 2024, 6:38 PM IST

ನವದೆಹಲಿ: 2022ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ನವದೆಹಲಿಯಲ್ಲಿ ಅದ್ಧೂರಿಯಾಗಿ ಜರುಗಿತು. ಹಿರಿಯ ಬಾಲಿವುಡ್ ನಟ ಹಾಗೂ ರಾಜಕಾರಣಿ ಮಿಥುನ್ ಚಕ್ರವರ್ತಿ ಪ್ರತಿಷ್ಠಿತ 'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿ ಮುಡಿಗೇರಿಸಿಕೊಂಡರು. ಭಾರತೀಯ ಚಿತ್ರರಂಗಕ್ಕೆ ನೀಡಿರುವ ಜೀವಮಾನದ ಕೊಡುಗೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

ಮಿಥುನ್ ಚಕ್ರವರ್ತಿ ಅವರ ಸ್ಫೂರ್ತಿದಾಯಕ ಸಿನಿ ಪಯಣ ಮುಂದಿನ ಪೀಳಿಗೆಯನ್ನು ಪ್ರೇರೇಪಿಸಲಿದೆ ಎಂದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆಯ ಜ್ಯೂರಿಗಳು ಅಭಿಪ್ರಾಯಪಟ್ಟಿದ್ದರು.

74ರ ಹರೆಯದ ನಟ 1976ರಲ್ಲಿ ಸಿನಿಪಯಣ ಆರಂಭಿಸಿದರು. 'ಮೃಗಯಾ' ಮಿಥುನ್ ಚಕ್ರವರ್ತಿ ಅವರ ಚೊಚ್ಚಲ ಚಿತ್ರ. ಮೃಣಾಲ್ ಸೇನ್ ನಿರ್ದೇಶನದ ಸಿನಿಮಾ ಮೂಲಕ ನಟನಾ ವೃತ್ತಿಜೀವನ ಪ್ರಾರಂಭ ಮಾಡಿದರು. ಚೊಚ್ಚಲ ಚಿತ್ರದಲ್ಲೇ ಅಮೋಘ ಅಭಿನಯದಿಂದ ಗಮನ ಸೆಳೆದ ನಟ, ಉತ್ತಮ ನಟ ಪ್ರಶಸ್ತಿ ಪಡೆದರು. ಡಿಸ್ಕೋ ಡ್ಯಾನ್ಸರ್, ಕಸಂ ಪೈದಾ ಕರ್ನೆ ವಾಲೆ ಕಿ, ಕಮ್ಯಾಂಡೋ, ಓ ಮೈ ಗಾಡ್ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಹಿಂದಿ ಮಾತ್ರವಲ್ಲದೇ ಬೆಂಗಾಳಿ ಚಿತ್ರಗಳಲ್ಲೂ ನಟಿಸಿದ್ದಾರೆ. ಇವರು ಪ್ರಮುಖ ಪಾತ್ರಗಳನ್ನು ಅಭಿನಯಿಸಿದ್ದ 19 ಸಿನಿಮಾಗಳು 1989ರಲ್ಲಿ ಒಂದೇ ವರ್ಷದ ತೆರೆಕಂಡಿದ್ದವು. ಹಾಗಾಗಿ, ಒಂದೇ ವರ್ಷ ಇಷ್ಟೊಂದು ಸಿನಿಮಾ ಬಿಡುಗಡೆಗೊಳಿಸಿದ ಕೀರ್ತಿ ಕೂಡಾ ಇವರಿಗೆ ಸಲ್ಲುತ್ತದೆ. ಹುಚ್ಚೆದ್ದು ಕುಣಿಯುವಂತಹ ಹಾಡುಗಳಲ್ಲಿಯೂ ನಟ ಬಣ್ಣ ಹಚ್ಚಿದ್ದಾರೆ.

ಸಿನಿಮಾ ಮಾತ್ರವಲ್ಲದೇ ರಾಜಕೀಯದಲ್ಲೂ ಸದ್ದು ಮಾಡಿದ್ದಾರೆ. 2014ರಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಮೂಲಕ ರಾಜ್ಯಸಭಾ ಸದಸ್ಯರಾಗಿ ಸಂಸತ್ ಪ್ರವೇಶಿ ಮಾಡಿದ್ದರು. ಆದ್ರೆ 2 ವರ್ಷಗಳ ನಂತರ ರಾಜೀನಾಮೆ ಸಲ್ಲಿಸಿದ್ದರು. 2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು.

ಇದೇ ವರ್ಷದ ಏಪ್ರಿಲ್​ನಲ್ಲಿ ಮಿಥುನ್ ಚಕ್ರವರ್ತಿ 'ಪದ್ಮಭೂಷಣ' ಗೌರವಕ್ಕೆ ಪಾತ್ರರಾದರು. ಅಂದು ಹೆಸರಾಂತ ಗಾಯಕಿ ಉಷಾ ಉತ್ತುಪ್ ಅವರಿಗೂ ಈ ಗೌರವ ಸಂದಿತ್ತು.

ಇದನ್ನೂ ಓದಿ:ಬಡವರ ಕಷ್ಟಗಳಿಗೆ ಸ್ಪಂದಿಸುವ 'ಕಾವಲಿಗ'ನಾದ ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್​​

ABOUT THE AUTHOR

...view details