'ಸತ್ಯ ಪಿಕ್ಚರ್ಸ್' ಕಡೆಯಿಂದ ಹೊಸ ಸಿನಿಮಾವೊಂದು ನಿಮ್ಮ ಮುಂದೆ ಬರಲು ಸಜ್ಜಾಗುತ್ತಿದೆ. ಡಿ. ಸತ್ಯಪ್ರಕಾಶ್ ನಿರ್ದೇಶಿಸಿ, ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಹೆಸರು ''X&Y''. ವಿಭಿನ್ನ ಶೀರ್ಷಿಕೆ ಮೂಲಕ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.
''ಎಕ್ಸ್ ಆ್ಯಂಡ್ ವೈ'' ಈ ಜನರೇಷನ್ನ ಕಥೆ. ಅಪ್ಪ-ಅಮ್ಮ ಆದವರ, ಅಪ್ಪ-ಅಮ್ಮ ಆಗುತ್ತಿರುವವರ, ಅಪ್ಪ-ಅಮ್ಮ ಆಗಬೇಕು ಎಂದುಕೊಂಡವರ ಕಥೆ. ಹಾಗೆಯೇ ಇಂದಿನ ಹುಡುಗ-ಹುಡುಗಿಯರ ಕಥೆ. ಮಕ್ಕಳ ಕಥೆ. ಇದೊಂದು ಕಾಮಿಡಿ ಜಾನರ್ ಸಿನಿಮಾ ಆಗಿದ್ದು, ಅತಿ ಸೂಕ್ಷ್ಮ ವಿಚಾರಗಳನ್ನು ಅಷ್ಟೇ ಸರಳವಾಗಿ ಹೇಳುವ ಪ್ರಯತ್ನ ನಡೆದಿದೆ.
ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಎರಡನೇ ಹಂತದ ಚಿತ್ರೀಕರಣಕ್ಕೆ ತಯಾರಿ ನಡೆಯುತ್ತಿದೆ. ವಾಸುಕಿ-ವೈಭವ್ ಸಂಗೀತ, ಲವಿತ್ ಛಾಯಾಗ್ರಹಣ, ಬಿ.ಎಸ್ ಕೆಂಪರಾಜು ಸಂಕಲನ, ವರದರಾಜ್ ಕಾಮತ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಅಥರ್ವ ಪ್ರಕಾಶ, ಬೃಂದಾ ಆಚಾರ್ಯ, ಅಯನ, ವೀಣಾ ಸುಂದರ್, ದೊಡ್ಡಣ್ಣ ಹೀಗೆ ಹಿರಿಯ ಮತ್ತು ಹೊಸ ಕಲಾವಿದರ ಸಂಗಮವಾಗಿದೆ.