ಕರ್ನಾಟಕ

karnataka

ETV Bharat / entertainment

ಕಾಲೇಜು ದಿನಗಳನ್ನು ನೆನಪಿಸಲಿದೆ 'ಬ್ಯಾಕ್ ಬೆಂಚರ್ಸ್'; ಸಿನಿಮಾ ಸಾಂಗ್ ರಿಲೀಸ್​​ - Back Benchers

'ಬ್ಯಾಕ್ ಬೆಂಚರ್ಸ್' ಚಿತ್ರದ 'ಯಲ್ಲೋ ಯಲ್ಲೋ' ಎಂಬ ಹಾಡು ಅನಾವರಣಗೊಂಡಿದೆ.

Back Benchers
'ಬ್ಯಾಕ್ ಬೆಂಚರ್ಸ್' ಚಿತ್ರತಂಡ (ETV Bharat)

By ETV Bharat Karnataka Team

Published : May 31, 2024, 7:40 PM IST

ಕನ್ನಡ ಚಿತ್ರರಂಗದಲ್ಲಿ ಕಾಲೇಜು ದಿನಗಳ ಕಥೆಗಳು ಸಾಕಷ್ಟು ಬಂದಿದೆ. ಆದರೆ, ಮನೋರಂಜನೆಯನ್ನೇ ಪ್ರಮುಖವಾಗಿಟ್ಟಿಕೊಂಡು ಕಾಲೇಜು ದಿನಗಳ ಕಥೆಯೊಂದು ಕನ್ನಡದಲ್ಲಿ ಬರುತ್ತಿದೆ. ಅದೇ 'ಬ್ಯಾಕ್ ಬೆಂಚರ್ಸ್' ಚಿತ್ರ. ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಿಗೆ ಕಚುಗುಳಿಯಿಟ್ಟಿರುವ 'ಬ್ಯಾಕ್ ಬೆಂಚರ್ಸ್' ಚಿತ್ರದ 'ಯಲ್ಲೋ ಯಲ್ಲೋ' ಎಂಬ ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಯವಜನತೆಗೆ ಮುದ ನೀಡುವ ಈ ಹಾಡನ್ನು ನಕುಲ್ ಅಭಯಂಕರ್ ಹಾಡಿದ್ದಾರೆ. ಸಂಗೀತವನ್ನೂ ನಕುಲ್ ಅಭಯಂಕರ್ ಅವರೇ ನೀಡಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

ಈ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ, ನಿರ್ಮಾಪಕ ಬಿ.ಆರ್ ರಾಜಶೇಖರ್ ಇದೊಂದು ಮನೋರಂಜನೆಯೇ ಪ್ರಮುಖವಾಗಿರುವ ಕಾಲೇಜು ಸ್ಟೋರಿ. ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ‌.‌ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಹೊಸ ಪ್ರತಿಭೆಗಳಾದ ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರು ಅಭಿನಯಿಸಿದ್ದಾರೆ.

'ಬ್ಯಾಕ್ ಬೆಂಚರ್ಸ್' ತಂಡ (ETV Bharat)

ಇದನ್ನೂ ಓದಿ:ಅರ್ಜುನ್​​ ಜೊತೆ ಬ್ರೇಕ್​​ಅಪ್ ವದಂತಿ: ಪ್ರೀತಿ, ಬೆಂಬಲದ ಬಗ್ಗೆ ಮಾತನಾಡಿದ ಮಲೈಕಾ ಅರೋರಾ - Malaika Arjun

ಯುವ ನಟರಾದ ರಂಜನ್ ಹಾಗೂ ಜತಿನ್ ಆರ್ಯನ್ ಮಾತನಾಡಿ, ನಿರ್ದೇಶಕ ರಾಜಶೇಖರ್ ಅವರು ನಮಗೆ ನೀಡಿದ ಪ್ರೋತ್ಸಾಹ ಅಷ್ಟಿಷ್ಟಲ್ಲ. ನಮ್ಮೆಲ್ಲರಿಗೂ ಇದು ಮೊದಲ ಚಿತ್ರ. ಆದರೆ, ನಮಗೆ ನಟನೆ ಹೊಸತಲ್ಲ. ನಾವೆಲ್ಲ ನಟನೆ ಕಲಿತು ಬಂದಿರುವವರು. ಈಗ ಚಿತ್ರಮಂದಿರಕ್ಕೆ ಹೆಚ್ಚಾಗಿ ಜನರು ಬರುತ್ತಿಲ್ಲ. ಆ ಮಾತನ್ನು ಸುಳ್ಳು ಮಾಡುವ ಪ್ರಯತ್ನವನ್ನು ನಾವು ಮಾಡುತ್ತೇವೆ‌. ವಿನೂತನ ಪ್ರಚಾರ ಮಾಡುವ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಮಾಡುತ್ತೇವೆ‌. ಚಿತ್ರಮಂದಿರಕ್ಕೆ ಬಂದ ಮೇಲೆ, ನಮ್ಮ ಚಿತ್ರ ನೀವು ಕೊಟ್ಟ ದುಡ್ಡಿಗೆ ಮೋಸ ಆಗುವುದಿಲ್ಲ ಎಂಬ ಭರವಸೆ ನೀಡುತ್ತೇವೆ ಎಂದರು.

'ಬ್ಯಾಕ್ ಬೆಂಚರ್ಸ್' ಈವೆಂಟ್ (ETV Bharat)

ಇದನ್ನೂ ಓದಿ:ಕೆಆರ್​ಜಿ ಸ್ಟುಡಿಯೋಸ್ ಪಾಲಾದ 'ಕೋಟಿ‌' ವಿತರಣಾ ಹಕ್ಕು; ಡಾಲಿ ಸಿನಿಮಾ ಬಿಡುಗಡೆಗೆ ದಿನಗಣನೆ - Kotee

ಈ ಚಿತ್ರಕ್ಕೆ ನಕುಲ್ ಅಭಯಂಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ ನಿರ್ವಹಿಸಿದ್ದಾರೆ. ರಂಜನ್ ಮತ್ತು ಅಮರ್ ಗೌಡ ಅವರ ಸಂಕಲನವಿದೆ. ಸದ್ಯ ಹಾಡಿನಿಂದ ಗಮನ ಸೆಳೆಯುತ್ತಿರೋ ಬ್ಯಾಕ್ ಬೆಂಚರ್ಸ್ ಚಿತ್ರ ಮುಂದಿನ ತಿಂಗಳು ತೆರೆಗೆ ಬರಲಿದೆ. ಸಿನಿಮಾ ನೋಡುವ ಕಾತರದಲ್ಲಿ ವೀಕ್ಷಕರಿದ್ದಾರೆ.

ABOUT THE AUTHOR

...view details