Bitter melon Health benefits:ಇಂದಿನ ಆಧುನಿಕ ಒತ್ತಡದ ಬದುಕಿನಲ್ಲಿ ಶುಗರ್ ಪೇಷಂಟ್ಗಳ ಸಂಖ್ಯೆ ಹೆಚ್ಚಾಗುತ್ತಲೇ ಸಾಗಿದೆ. ಆರೋಗ್ಯ ಪ್ರಜ್ಞೆ ಇರುವವರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ಅನುಸರಿಸುತ್ತಾರೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು.
ಆಹಾರ ಹಾಗೂ ಪಾನೀಯಗಳ ವಿಷಯದಲ್ಲಿ ಸಂಪೂರ್ಣವಾಗಿ ಗಮನ ಹರಿಸಬೇಕಾಗುತ್ತದೆ. ನಿಮ್ಮ ಆಹಾರ ಕ್ರಮಗಳ ಬಗ್ಗೆ ಕಾಳಜಿವಹಿಸಿದರೆ, ನಿಮ್ಮ ಶುಗರ್ ನಿಯಂತ್ರಣದಲ್ಲಿ ಇರುತ್ತದೆ. ಆದರೆ, ಬಹುತೇಕರು ತಮ್ಮ ಕೆಲಸದ ಒತ್ತಡ ಮಧ್ಯೆ ತಮ್ಮ ಆರೋಗ್ಯ ಬಗ್ಗೆ ಕಾಳಜಿವಹಿಸಲು ಸಾಧ್ಯವಾಗುವುದಿಲ್ಲ. ಸಾಧ್ಯವಾದಷ್ಟು ಮಟ್ಟಿಗೆ ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷವಾದ ಕಾಳಜಿ ವಹಿಸುವುದು ತುಂಬಾ ಮುಖ್ಯವಾಗಿದೆ.
ಗ್ಲೂಕೋಸ್ ಮಟ್ಟ ನಿಯಂತ್ರಿಸುತ್ತೆ:ಸಾಮಾನ್ಯವಾಗಿ ನಮ್ಮಲ್ಲಿರುವ ಹೆಚ್ಚಿನವರ ಮನಸ್ಸಿನಲ್ಲಿ ಒಂದು ಪ್ರಶ್ನೆ ಇದ್ದೆ ಇರುತ್ತದೆ. ಅದು ಏನೆಂದರೆ, ಹಾಗಲಕಾಯಿ ಸೇವನೆ ಮಾಡುವುದರಿಂದ ಮಧುಮೇಹ ನಿಯಂತ್ರಿಸಲು ಸಹಾಯವಾಗುತ್ತದೆಯೇ? ಈ ಕುರಿತಂತೆ ಕೆಲವು ಸಂಶೋಧನೆಗಳು ತಿಳಿಸುವ ಪ್ರಕಾರ, ಹಾಗಲಕಾಯಿ ಮಧುಮೇಹಿಗಳಿಗೆ ತುಂಬಾ ಉಪಯುಕ್ತವಾಗಿದೆ. ಹಾಗಲಕಾಯಿ ಸೇವಿಸುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟ ನಿಯಂತ್ರಿಸುತ್ತದೆ ಎಂದು ಸಂಶೋಧಕರು ತಿಳಿಸುತ್ತಾರೆ.
ಸಂಶೋಧನೆ ಏನು ತಿಳಿಸುತ್ತೆ?:ಎನ್ಸಿಬಿಐಯಲ್ಲಿ ಪ್ರಕಟವಾದ ವರದಿಯ ಪ್ರಕಾರ, ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಮತೋಲಿತ ಆಹಾರ ಸೇವಿಸಿವುದು ಅವಶ್ಯವಾಗಿದೆ. ಮಧುಮೇಹಿಗಳು ಹಾಗಲಕಾಯಿಯ ಜ್ಯೂಸ್ ಕುಡಿಯಬಹುದು. ಆದರೆ, ಹುರಿದ ಹಾಗಲಕಾಯಿ ತಿನ್ನುವುದರಿಂದ ಯಾವುದೇ ಪ್ರಯೋಜನವಿಲ್ಲ. ಎಲ್ಲಾ ಪೋಷಕಾಂಶಗಳು ಕಳೆದುಹೋಗುತ್ತವೆ. ಸಾಧ್ಯವಾದಷ್ಟು ಬೇಯಿಸಿದ ಹಾಗಲಕಾಯಿ ತಿನ್ನಬಾರದು. ವೈದ್ಯರ ತಿಳಿಸುವ ಪ್ರಕಾರ, ಹಾಗಲಕಾಯಿ ಮಧುಮೇಹವನ್ನು ನಿಯಂತ್ರಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ವ್ಯಾಯಾಮ ಹಾಗೂ ವಾಕಿಂಗ್ ಜೊತೆಗೆ ಸಮತೋಲಿತ ಆಹಾರ ಸೇವಿಸುವುದು ಅಗತ್ಯವಿದೆ.