ಆರೋಗ್ಯಕರ ಆಹಾರಗಳ ಪೈಕಿ ಡ್ರ್ಯಾಗನ್ ಹಣ್ಣು ಮೊದಲ ಸ್ಥಾನದಲ್ಲಿ ಬರುತ್ತದೆ. ಈ ಹಣ್ಣು ನೋಡಲು ಆಕರ್ಷಕವಾಗಿದೆ. ಅಷ್ಟೇ ಅಲ್ಲ, ವಿಶಿಷ್ಟ ರುಚಿಯನ್ನೂ ಹೊಂದಿದೆ. ಇದರಿಂದ ಹಲವು ಆರೋಗ್ಯ ಪ್ರಯೋಜನಗಳೂ ಇವೆ.
ಡ್ರ್ಯಾಗನ್ ಫ್ರೂಟ್ ಪೌಷ್ಟಿಕಾಂಶದ ಶಕ್ತಿ ಕೇಂದ್ರ ಎಂದೂ ಹೇಳಲಾಗುತ್ತದೆ. ಇದರಲ್ಲಿರುವ ಖನಿಜಾಂಶಗಳು, ವಿಟಮಿನ್ಗಳು ಮತ್ತು ಪೋಷಕಾಂಶಗಳು ನಮ್ಮನ್ನು ವಿವಿಧ ರೋಗಗಳಿಂದ ರಕ್ಷಿಸುತ್ತವೆ ಎಂದು ವೈದ್ಯರು, ಆಹಾರ ತಜ್ಞರು ಹೇಳುತ್ತಾರೆ. ಇದರಿಂದಾಗಿ ಈ ಹಣ್ಣು ತಿನ್ನುವವರ ಸಂಖ್ಯೆ ಹೆಚ್ಚುತ್ತಿದೆ.
'ಸೂಪರ್ ಫುಡ್' ಡ್ರ್ಯಾಗನ್ ಫ್ರೂಟ್: ಡ್ರ್ಯಾಗನ್ ಹಣ್ಣು ಹೈಲೋಸೆರಿಯಸ್ ಅಡಿಯಲ್ಲಿ ವರ್ಗೀಕರಿಸಲ್ಪಟ್ಟಿದೆ. ಇದರಲ್ಲಿ ವಿಟಮಿನ್-ಸಿ ಸಮೃದ್ಧವಾಗಿದೆ. ಉತ್ಕರ್ಷಣ ನಿರೋಧಕಗಳು ಮತ್ತು ಆಹಾರದ ಫೈಬರ್‌ನೊಂದಿಗೆ ಆಹಾರ ಪದ್ಧತಿಯನ್ನು ಬದಲಾಯಿಸುವ ಮತ್ತು ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸುವ 'ಸೂಪರ್‌ಫುಡ್' ಎಂದು ಪರಿಗಣಿಸಲಾಗಿದೆ.
ರೋಗನಿರೋಧಕ ಶಕ್ತಿ ಹೆಚ್ಚಿಸುತ್ತೆ:ಡ್ರ್ಯಾಗನ್ ಫ್ರೂಟ್‌ನಲ್ಲಿರುವ ಸಮೃದ್ಧ ವಿಟಮಿನ್-ಸಿ ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಡ್ರ್ಯಾಗನ್ ಹಣ್ಣಿನ ನಿಯಮಿತ ಸೇವನೆಯು ದೇಹದ ರಕ್ಷಣೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ, ಸಾಮಾನ್ಯ ರೋಗಗಳು ಮತ್ತು ಸೋಂಕುಗಳ ವಿರುದ್ಧ ಹೆಚ್ಚು ಪ್ರಬಲ ಹೋರಾಡಲು ಪ್ರಮುಖ ಪಾತ್ರವಹಿಸುತ್ತದೆ.
ಜೀರ್ಣಕ್ರಿಯೆ ವೃದ್ಧಿಗೆ ಸಹಾಯ:ಡ್ರ್ಯಾಗನ್ ಹಣ್ಣಿನಲ್ಲಿ ಫೈಬರ್ ಸಮೃದ್ಧವಾಗಿರುವುದರಿಂದ ಜೀರ್ಣಕ್ರಿಯೆಗೆ ಹೆಚ್ಚು ಸಹಾಯ ಮಾಡುತ್ತದೆ. ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಇದರಲ್ಲಿರುವ ಫೈಬರ್ ನಿಯಮಿತವಾಗಿ ಕರುಳಿನ ಚಲನೆಯನ್ನು ಸುಗಮಗೊಳಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಇದರಿಂದಾಗಿ ಜೀರ್ಣಕ್ರಿಯೆಗೆ ಮಹತ್ವದ ಕೊಡುಗೆ ನೀಡುತ್ತದೆ.
ಮಧುಮೇಹ ನಿಯಂತ್ರಣ: ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಮತ್ತು ಹೆಚ್ಚಿನ ಫೈಬರ್ ಅಂಶ ಹೊಂದಿರುವ ಡ್ರ್ಯಾಗನ್ ಹಣ್ಣು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ವರದಾನವಾಗಿದೆ. ಇದು ಗ್ಲೂಕೋಸ್ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹ ಹೊಂದಿರುವ ವ್ಯಕ್ತಿಗಳಿಗೆ ಅಥವಾ ಸಮತೋಲಿತ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಬಯಸುವವರಿಗೆ ಸೂಕ್ತವಾದ ಹಣ್ಣು ಆಗಿದೆ.
ಹೃದಯದ ಆರೋಗ್ಯ:ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕ ಗುಣಗಳು ಹೃದಯದ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಮತ್ತು ರಕ್ತನಾಳಗಳನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುವ ಮೂಲಕ, ಡ್ರ್ಯಾಗನ್ ಹಣ್ಣು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಡ್ರ್ಯಾಗನ್ ಹಣ್ಣು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಸಂಶೋಧನೆಯೊಂದು ಬಹಿರಂಗಪಡಿಸಿದೆ. ಈ ಸಂಶೋಧನೆಯ ವರದಿ "ಫುಡ್ ಅಂಡ್ ಫಂಕ್ಷನಲ್ ಫುಡ್ಸ್" ಜರ್ನಲ್‌ನಲ್ಲಿ ಪ್ರಕಟವಾಗಿದೆ. ಡಾ. ಡಬ್ಲ್ಯೂ. ಝೌ ಮತ್ತು ಝಡ್. ವೈ. ಲಿನ್ (Dr. W. Zhou, Z. Y. Lin) ಅಧ್ಯಯನದಲ್ಲಿ ಭಾಗವಹಿಸಿದ್ದರು.