Health Benefits Of Green Tea :ಗ್ರೀನ್ ಟೀ ಸೇವನೆ ಮಾಡುವುದರಿಂದ ದೇಹದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ಸೇವಿಸುವ ಪಾನೀಯ ಅಂದ್ರೆ ಗ್ರೀನ್ ಟೀ ಆಗಿದೆ. ಗ್ರೀನ್ ಟೀ ದೇಹ ಹಾಗೂ ಚರ್ಮದ ಆರೋಗ್ಯ ಕಾಪಾಡುವಂತಹ ಅನೇಕ ಅಂಶಗಳನ್ನು ಒಳಗೊಂಡಿದೆ. ಗ್ರೀನ್ ಟೀ ಮೆದುಳಿನ ಕಾರ್ಯವನ್ನು ಸುಧಾರಿಸಲು ಹಾಗೂ ಕರುಳಿನ ಆರೋಗ್ಯಕ್ಕೆ ಉತ್ತಮವಾಗಿದೆ.
ಗ್ರೀನ್ ಟೀ ಸ್ಮರಣಶಕ್ತಿ ಹೆಚ್ಚಿಸುತ್ತದೆ. ಇದರೊಂದಿಗೆ ಆಲ್ಝೈಮರ್, ಪಾರ್ಕಿನ್ಸನ್ ನಂತಹ ನರ ಕ್ಷೀಣಗೊಳ್ಳುವ ಕಾಯಿಲೆಗಳಿಂದ ರಕ್ಷಿಸುವ ಸಾಮರ್ಥ್ಯ ಇದಕ್ಕಿದೆ. ನಿಯಮಿತವಾಗಿ ಗ್ರೀನ್ ಟೀ ಸೇವಿಸುವುದರಿಂದ ಆರೋಗ್ಯಕ್ಕೆ ಯಾವೆಲ್ಲಾ ಪ್ರಯೋಜನಗಳು ದೊರೆಯುತ್ತವೆ ಎಂಬದನ್ನು ಅರಿತುಕೊಳ್ಳೋಣ.
ಉತ್ಕರ್ಷಣ ನಿರೋಧಕ, ಉರಿಯೂತ ನಿವಾರಕ ಗುಣಗಳು :ಗ್ರೀನ್ ಟೀ ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳು ಹಾಗೂ ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ. ಜರ್ನಲ್ ಆಫ್ ನ್ಯೂಟ್ರಿಷನಲ್ ಬಯೋಕೆಮಿಸ್ಟ್ರಿಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಇವು ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಹಾಗೂ ದೇಹದಲ್ಲಿನ ಉರಿಯೂತ ಕಡಿಮೆ ಮಾಡಲು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂಬುದು ತಿಳಿದಿದೆ.
ಮಧುಮೇಹ ನಿಯಂತ್ರಣ :ರಕ್ತದಲ್ಲಿನ ಶಗುರ್ ಲೆವಲ್ನ್ನು ನಿಯಂತ್ರಿಸಲು ಗ್ರೀನ್ ಟೀ ಹೆಚ್ಚು ಉಪಯುಕ್ತವಾಗಿದೆ. ಅಮೆರಿಕನ್ ಜರ್ನಲ್ ಆಫ್ ಕ್ಲಿನಿಕಲ್ ನ್ಯೂಟ್ರಿಷನ್‌ನಲ್ಲಿ ಪ್ರಕಟವಾದ ಅಧ್ಯಯನವು, ಗ್ರೀನ್ ಟೀ ಟೈಪ್-2 ಮಧುಮೇಹದ ಅಪಾಯ ಕಡಿಮೆ ಮಡುತ್ತದೆ. ಜೊತೆಗೆ ಇನ್ಸುಲಿನ್ ಸೂಕ್ಷ್ಮತೆ ಸುಧಾರಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಸ್ಪಷ್ಟಪಡಿಸಿದೆ.
ಹೃದಯದ ಆರೋಗ್ಯಕ್ಕೆ ಉತ್ತಮ :ಗ್ರೀನ್ ಟೀ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್, ರಕ್ತದೊತ್ತಡ ಹಾಗೂ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವಲ್ಲಿ ಉಪಯುಕ್ತವಾಗಿದೆ. ಗ್ರೀನ್ ಟೀ ರಕ್ತನಾಳಗಳ ಒಟ್ಟಾರೆ ಕಾರ್ಯವನ್ನು ಸುಧಾರಿಸುತ್ತದೆ. ಇದು ಹೃದಯ ಕಾಯಿಲೆಯ ಅಪಾಯ ಕಡಿಮೆ ಮಾಡುತ್ತದೆ. ಹೃದಯದ ಆರೋಗ್ಯ ಕಾಪಾಡುತ್ತದೆ. ಇದರಿಂದ ನಿಯಮಿತವಾಗಿ ಗ್ರೀನ್ ಟೀ ಕುಡಿಯಲು ತಜ್ಞರು ಸಲಹೆ ನೀಡುತ್ತಾರೆ.
ಕ್ಯಾನ್ಸರ್ ತಡೆಯಲು ಸಹಾಯ ಮಾಡುತ್ತೆ :ಗ್ರೀನ್ ಟೀ ಹೆಚ್ಚಿನ ಮಟ್ಟದ ಉರಿಯೂತ ನಿವಾರಕವಾಗಿದೆ. ಜೊತೆಗೆ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಸ್ತನ ಕ್ಯಾನ್ಸರ್, ಪ್ರಾಸ್ಟೇಟ್ ಕ್ಯಾನ್ಸರ್ ಮತ್ತು ಕೊಲೊನ್ ಕ್ಯಾನ್ಸರ್‌ನಂತಹ ವಿವಿಧ ರೀತಿಯ ಕ್ಯಾನ್ಸರ್‌ಗಳ ಅಪಾಯ ಕಡಿಮೆ ಮಾಡುತ್ತದೆ ಎಂದು ತಜ್ಞರು ತಿಳಿಸುತ್ತಾರೆ. ಅಮೆರಿಕನ್ ಜರ್ನಲ್ ಆಫ್ ಕ್ಲಿನಿಕಲ್ ನ್ಯೂಟ್ರಿಷನ್‌ನಲ್ಲಿ ನಡೆದ ಅಧ್ಯಯನವು ಗ್ರೀನ್ ಟೀನಲ್ಲಿರುವ ಪಾಲಿಫಿನಾಲ್‌ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆ ಮತ್ತು ಗೆಡ್ಡೆಯ ಬೆಳವಣಿಗೆ ತಡೆಯಲು ಸಹಾಯ ಮಾಡುತ್ತದೆ ಎಂದು ಕಂಡುಹಿಡಿದಿದೆ.