Sleep According to Age: ನಮಗೆ ಆಹಾರ, ನೀರು ಮತ್ತು ಗಾಳಿ ಎಷ್ಟು ಮುಖ್ಯವೋ ನಿದ್ದೆಯೂ ಅಷ್ಟೇ ಮುಖ್ಯ. ಸರಿಯಾದ ಪ್ರಮಾಣದಲ್ಲಿ ನಿದ್ರೆ ಮಾಡದಿದ್ದರೆ ಅನೇಕ ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಸಂಶೋಧನೆಗಳು ಬಹಿರಂಗ ಪಡಿಸಿವೆ. ಹಾಗಾಗಿ ಪ್ರತಿದಿನ ಸರಿಯಾದ ಪ್ರಮಾಣದಲ್ಲಿ ನಿದ್ರೆ ಮಾಡುವುದು ಆರೋಗ್ಯದ ಜೊತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೂ ಹೆಚ್ಚಿನ ಪ್ರಯೋಜನ ಆಗಲಿದೆ ಎನ್ನುತ್ತಾರೆ ವೈದ್ಯರು.
ಆದರೆ ಬಹುತೇಕ ಜನರಿಗೆ ದಿನಕ್ಕೆ ಎಷ್ಟು ಗಂಟೆ ನಿದ್ರೆ ಮಾಡಬೇಕೆಂಬುದರ ಬಗ್ಗೆ ಗೊಂದಲಗಳೂ ಇವೆ. ಕೆಲವರು ದಿನಕ್ಕೆ 7 ಗಂಟೆ ನಿದ್ರೆ ಮಾಡುವುದು ಉತ್ತಮ ಎಂದರೇ ಮತ್ತೆ ಕೆಲವರು 8 ಗಂಟೆ ಕಾಲ ನಿದ್ರೆ ಮಾಡಬೇಕೆಂದು ಹೇಳುತ್ತಾರೆ. ಆದರೇ ವೈದ್ಯರ ಪ್ರಕಾರ, ಒಬ್ಬ ವ್ಯಕ್ತಿ ತನ್ನ ವಯಸ್ಸಿಗೆ ಅನುಗುಣವಾಗಿ ನಿದ್ರೆ ಮಾಡುವುದರಿಂದ ಹೆಚ್ಚಿನ ಪ್ರಯೋಜನಗಳಾಗಲಿವೆ ಎನ್ನುತ್ತಾರೆ. ಹಾಗಾದ್ರೆ ಯಾವ ವಯಸ್ಸಿನವರು ಎಷ್ಟು ಗಂಟೆ ಕಾಲ ನಿದ್ರಿಸಬೇಕು ಎಂಬುದರ ಬಗ್ಗೆ ಈ ಸ್ಟೋರಿಯಲ್ಲಿ ತಿಳಿದುಕೊಳ್ಳೊಣ. ಇದಕ್ಕೂ ಮೊದಲು ಸರಿಯಾದ ಪ್ರಮಾಣದಲ್ಲಿ ನಿದ್ರೆ ಮಾಡದಿದ್ರೆ ಯಾವೆಲ್ಲ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಅನ್ನೋದನ್ನು ಸಹ ತಿಳಿಯೋಣ.
ಇದನ್ನೂ ಓದಿ: ರಾತ್ರಿ ತಲೆಗೆ ಎಣ್ಣೆ ಹಚ್ಚಿ ಮಲಗುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಗೊತ್ತಾ...? - Benefits of Oiling Hair At Night
ಕಡಿಮೆ ನಿದ್ರೆಯಿಂದ ಆರೋಗ್ಯ ಮೇಲೆ ಪರಿಣಾಮ:ಒಬ್ಬ ವ್ಯಕ್ತಿಯು ದಿನಕ್ಕೆ ಸರಿಯಾದ ನಿದ್ರೆ ಮಾಡದೇ ಇದ್ದಲ್ಲಿ ಮಧುಮೇಹದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದಲ್ಲದೆ, ಮಹಿಳೆಯರು ಕಡಿಮೆ ನಿದ್ರೆ ಮಾಡುವುದರಿಂದ, ಸ್ತನ ಕ್ಯಾನ್ಸರ್, ಹೃದಯ ಸಂಬಂಧಿತ ಗಂಭೀರ ಕಾಯಿಲೆಗಳಿಗೆ ತುತ್ತಾಗಬಹುದು ಎಂದು ಹೇಳಲಾಗುತ್ತದೆ. ಕಡಿಮೆ ನಿದ್ರೆ ಮಾಡುವುದರಿಂದ ದೇಹದ ಇತರ ಜೀವಕೋಶಗಳ ಮೇಲೂ ಕೆಟ್ಟ ಪರಿಣಾಮ ಬೀರುವುದಲ್ಲದೇ ಮೂಳೆಗಳು ಕ್ರಮೇಣ ದುರ್ಬಲಗೊಳ್ಳಲು ಪ್ರಾರಂಭಿಸುತ್ತವೆ ಎಂದು ವೈದ್ಯರು ಹೇಳುತ್ತಾರೆ.