ಉತ್ತಮ ಆರೋಗ್ಯಕ್ಕೆ ಪ್ರತಿದಿನ ಸಮತೋಲಿತ ಆಹಾರ ಸೇವಿಸಬೇಕು. ಹಾಗಾದಾಗ ಮಾತ್ರ ಯಾವುದೇ ಅನಾರೋಗ್ಯ ಸಮಸ್ಯೆಗಳು ನಮ್ಮನ್ನು ಬಾಧಿಸುವುದಿಲ್ಲ ಎನ್ನುತ್ತಾರೆ ಆರೋಗ್ಯ ತಜ್ಞರು. ಆದರೆ ಇತ್ತೀಚೆಗೆ ಅನೇಕರು ಬಾಯಿ ರುಚಿ ಹೆಸರಿನಲ್ಲಿ ಹೆಚ್ಚು ಸಂಸ್ಕರಿಸಿದ ಆಹಾರಗಳನ್ನು ತಿನ್ನುತ್ತಿದ್ದಾರೆ. ಇದರಿಂದ ದೀರ್ಘಾವಧಿಯಲ್ಲಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ.
ಬ್ರೆಡ್: ನಮ್ಮಲ್ಲಿ ಹೆಚ್ಚಿನವರು ಬ್ರೆಡ್ ತಿನ್ನಲು ಇಷ್ಟಪಡುತ್ತಾರೆ. ಅಲ್ಟ್ರಾ-ಪ್ರೊಸೆಸ್ಡ್ ಆಹಾರಗಳಲ್ಲಿ ಒಂದಾದ ಬ್ರೆಡ್ ತಿನ್ನುವುದರಿಂದ ದೇಹಕ್ಕೆ ಹೆಚ್ಚಿನ ಪೋಷಕಾಂಶಗಳು ದೊರೆಯುವುದಿಲ್ಲ. ಅವುಗಳನ್ನು ತಯಾರಿಸಲು ಸಂಸ್ಕರಿಸಿದ ಹಿಟ್ಟು, ಹೆಚ್ಚಿನ ಫ್ರಕ್ಟೋಸ್ ಕಾರ್ನ್ ಸಿರಪ್, ಸಕ್ಕರೆ ಮತ್ತು ಹೈಡ್ರೋಜನೀಕರಿಸಿದ ಕೊಬ್ಬುಗಳನ್ನು ಬಳಸಲಾಗುತ್ತದೆ. ಬಣ್ಣ ಮತ್ತು ರುಚಿ ಹೆಚ್ಚಿಸಲು ಕೃತಕ ಬಣ್ಣಗಳು ಮತ್ತು ಎಮಲ್ಸಿಫೈಯರ್ಗಳನ್ನು ಬಳಸುತ್ತಾರೆ. ಅದಕ್ಕಾಗಿಯೇ ಇವುಗಳನ್ನು ತಿನ್ನುವುದರಿಂದ ತೂಕ ಹೆಚ್ಚಾಗುವುದು ಮತ್ತು ಅನೇಕ ಆರೋಗ್ಯ ಸಮಸ್ಯೆಗಳೂ ಉಂಟಾಗುತ್ತವೆ.
ಚಾಕೊಲೇಟ್, ಬಿಸ್ಕತ್ತುಗಳು: ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡಾ ಚಾಕೊಲೇಟ್ ಮತ್ತು ಬಿಸ್ಕತ್ ತಿನ್ನಲು ಇಷ್ಟಪಡುತ್ತಾರೆ. ಆದರೆ ಇವುಗಳನ್ನು ತಯಾರಿಸಲು ಸಂಸ್ಕರಿಸಿದ ಹಿಟ್ಟು, ಸಕ್ಕರೆ, ಕೋಕೋ ಪೌಡರ್ ಮತ್ತು ಉಪ್ಪಿನಂತಹ ವಿವಿಧ ಪದಾರ್ಥಗಳನ್ನು ಬಳಸಲಾಗುತ್ತದೆ. ಪ್ರತಿನಿತ್ಯ ಇವುಗಳನ್ನು ತಿನ್ನುವುದರಿಂದ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚುತ್ತದೆ. ತಜ್ಞರು ಹೇಳುವಂತೆ ಚಾಕೊಲೇಟ್ ಮತ್ತು ಬಿಸ್ಕೆತ್ ತಿನ್ನುವುದರಿಂದ ಹಲ್ಲು ಹುಳುಕಾಗುವ ಅಪಾಯವೂ ಹೆಚ್ಚು.
ಫ್ರೆಂಚ್ ಫ್ರೈಸ್:ಫ್ರೆಂಚ್ ಫ್ರೈಗಳು ಅನೇಕರ ನೆಚ್ಚಿನ ತ್ವರಿತ ಆಹಾರ ಪದಾರ್ಥಗಳಲ್ಲಿ ಒಂದು. ಆದ್ರೆ ಇದರಲ್ಲಿ ಟ್ರಾನ್ಸ್ ಕೊಬ್ಬುಗಳು ಮತ್ತು ಉಪ್ಪು ಅಧಿಕ. ಹೆಚ್ಚು ಫ್ರೆಂಚ್ ಫ್ರೈಗಳನ್ನು ತಿನ್ನುವುದು ಹೃದ್ರೋಗ, ಪಾರ್ಶ್ವವಾಯು, ಟೈಪ್ 2 ಮಧುಮೇಹ ಮತ್ತು ಬೊಜ್ಜು ಮುಂತಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.