Why Women are More Anxiety Compared to Men:ಆತಂಕ ಪಡುವುದು ಸಹಜ. ಒಂದಲ್ಲ, ಒಂದು ಹಂತದಲ್ಲಿ ಎಲ್ಲರೂ ಆತಂಕಕ್ಕೆ ಒಳಗಾಗುತ್ತಾರೆ. ಆರ್ಥಿಕ ಸಮಸ್ಯೆ, ಕೌಟುಂಬಿಕ ಸಮಸ್ಯೆಗಳಿಂದ ಅವರು ಬಳಲುವುದು ಸಾಮಾನ್ಯ. ಆದರೂ ಪುರುಷರಿಗಿಂತ ಮಹಿಳೆಯರು ಹೆಚ್ಚು ಚಿಂತಿತರಾಗಿರುತ್ತಾರೆ ಎಂದು ತಜ್ಞರು ಹೇಳುತ್ತಾರೆ. ಅನೇಕ ಅಧ್ಯಯನಗಳೂ ಇದನ್ನು ಸ್ಪಷ್ಟಪಡಿಸುತ್ತವೆ. ಅದಕ್ಕೆ ಕಾರಣಗಳನ್ನೂ ವಿವರಿಸಲಾಗಿದೆ.
ಹಾರ್ಮೋನುಗಳ ಬದಲಾವಣೆ:ದೇಹದಲ್ಲಿನ ಹಾರ್ಮೋನುಗಳ ಬದಲಾವಣೆಯು ಪುರುಷರಿಗಿಂತ ಭಿನ್ನವಾಗಿ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ. ಮಹಿಳೆಯರು ಜೀವನದ ವಿವಿಧ ಹಂತಗಳಲ್ಲಿ ವಿಶೇಷವಾಗಿ ಋತುಚಕ್ರ ಸಮಯದಲ್ಲಿ ಮತ್ತು ಗರ್ಭಾವಸ್ಥೆಯಲ್ಲಿ ಈ ಬದಲಾವಣೆಗಳನ್ನು ಅನುಭವಿಸುತ್ತಾರೆ. ಈ ಬದಲಾವಣೆಗಳು ಈಸ್ಟ್ರೊಜೆನ್ ಮತ್ತು ಪ್ರೊಜೆಸ್ಟರಾನ್ ನಂತಹ ಹಾರ್ಮೋನುಗಳ ಮಟ್ಟದಲ್ಲಿ ಏರಿಳಿತಕ್ಕೆ ಕಾರಣವಾಗುತ್ತವೆ. ಹೀಗಾಗಿ ಈ ಹಾರ್ಮೋನುಗಳು ಮಹಿಳೆಯರ ದೇಹ ಮತ್ತು ಮೆದುಳು ಎರಡರ ಮೇಲೆಯೂ ಪರಿಣಾಮ ಬೀರುತ್ತವೆ. ಇದು ಆತಂಕ ಮತ್ತು ಕಿರಿಕಿರಿಯಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.
ಮೆದುಳಿನಲ್ಲಿನ ರಾಸಾಯನಿಕ ಕ್ರಿಯೆಗಳಲ್ಲಿ ಬದಲಾವಣೆ: ತಜ್ಞರ ಪ್ರಕಾರ, ಮಹಿಳೆಯರ ಮೆದುಳಿನಲ್ಲಿನ ರಾಸಾಯನಿಕ ಬದಲಾವಣೆಗಳು ಪುರುಷರಿಗಿಂತ ಭಿನ್ನವಾಗಿರುತ್ತವೆ. ಇಂತಹ ಬದಲಾವಣೆಗಳಿಂದಾಗಿ ಪುರುಷರಿಗಿಂತ ಮಹಿಳೆಯರು ಆತಂಕದ ಕಾಯಿಲೆಗಳಿಗೆ ಹೆಚ್ಚು ಒಳಗಾಗುತ್ತಾರೆ. ಉದಾಹರಣೆಗೆ, ಮಾನಸಿಕ ಸ್ಥಿತಿಯನ್ನು ನಿಯಂತ್ರಿಸುವ ಸಿರೊಟೋನಿನ್ ನಂತಹ ನ್ಯೂರೋಟ್ರಾನ್ಸ್ಮಿಟರ್ಗಳು ಮಹಿಳೆಯರಲ್ಲಿ ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಇದರಿಂದಾಗಿ ಪುರುಷರಿಗಿಂತ ಮಹಿಳೆಯರು ಹೆಚ್ಚು ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಾರೆ ಎಂದು ತಜ್ಞರು ವಿವರಿಸುತ್ತಾರೆ.
ಜರ್ನಲ್ ಆಫ್ ದಿ ಅಮೆರಿಕನ್ ಮೆಡಿಕಲ್ ಅಸೋಸಿಯೇಷನ್ (JAMA) ನಲ್ಲಿ ಪ್ರಕಟವಾದ 2000 ರ ಅಧ್ಯಯನ ಪ್ರಕಾರ, ಕಡಿಮೆ ಸಿರೊಟೋನಿನ್ ಮಟ್ಟವನ್ನು ಹೊಂದಿರುವ ಜನರು ಆತಂಕದ ಅಸ್ವಸ್ಥತೆಗಳಿಂದ ಬಳಲುತ್ತಿರುವ ಸಾಧ್ಯತೆಯಿದೆ ಎಂದು ಕಂಡುಹಿಡಿದಿದೆ. ಹಾರ್ವರ್ಡ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನಲ್ಲಿ ಎಪಿಡೆಮಿಯಾಲಜಿ ಮತ್ತು ಬಯೋಸ್ಟಾಟಿಸ್ಟಿಕ್ಸ್ ಪ್ರಾಧ್ಯಾಪಕ ಡಾ. ರೊನಾಲ್ಡ್ ಕೆ. ಕೆಸ್ಲರ್ ಈ ಸಂಶೋಧನೆಯಲ್ಲಿ ಭಾಗವಹಿಸಿದ್ದರು.