ಬೈರುತ್, ಲೆಬನಾನ್: ಅಕ್ಟೋಬರ್ 8, 2023 ರಿಂದ ಆರಂಭವಾಗಿರುವ ಹಿಜ್ಬುಲ್ಲಾ- ಇಸ್ರೇಲ್ ಸಂಘರ್ಷದಲ್ಲಿ ಇದುವರೆಗೂ ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ 2,367 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. 11,088 ಮಂದಿ ಇದುವರೆಗೂ ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ.
ಅಕ್ಟೋಬರ್ 15 ರಂದು ಲೆಬನಾನ್‌ನ ವಿವಿಧ ಪ್ರದೇಶಗಳ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ. 182ಕ್ಕಿಂತ ಹೆಚ್ಚು ಮಂದಿ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ದೇಶದ ದಕ್ಷಿಣ ಪ್ರಾಂತ್ಯದಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು 92 ಇತರರು ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ. ನಬಾತಿಹ್ ಗವರ್ನರೇಟ್‌ನಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದರೆ 49 ಮಂದಿ ಗಾಯಗೊಂಡಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.