ಕರ್ನಾಟಕ

karnataka

ETV Bharat / international

ಪಾಕಿಸ್ತಾನದ ಚೆಕ್‌ಪೋಸ್ಟ್‌ ಮೇಲೆ ಉಗ್ರರ ದಾಳಿ: ನಾಲ್ವರು ಭದ್ರತಾ ಸಿಬ್ಬಂದಿ ಸಾವು - MILITANTS ATTACK ON PAK

ಪಾಕಿಸ್ತಾನದ ಖೈಬರ್​ ಪಖ್ತುಂಖ್ವಾ ಪ್ರಾಂತ್ಯದಲ್ಲಿರುವ ಚೆಕ್​ ಪೋಸ್ಟ್​ ಮೇಲೆ ಉಗ್ರರು ಗುರುವಾರ ದಾಳಿ ನಡೆಸಿದ್ದಾರೆ.

ಪಾಕಿಸ್ತಾನದ ಚೆಕ್‌ಪೋಸ್ಟ್‌ ಮೇಲೆ ಉಗ್ರರ ದಾಳಿ
ಪಾಕಿಸ್ತಾನದ ಚೆಕ್‌ಪೋಸ್ಟ್‌ ಮೇಲೆ ಉಗ್ರರ ದಾಳಿ (PTI)

By PTI

Published : Oct 25, 2024, 9:50 AM IST

ಪೇಶಾವರ​(ಪಾಕಿಸ್ತಾನ):ಪಾಕಿಸ್ತಾನದ ಪ್ರಕ್ಷುಬ್ದ ಖೈಬರ್​ ಪಖ್ತುಂಖ್ವಾ ಪ್ರಾಂತ್ಯದ ಚೆಕ್​ ಪೋಸ್ಟ್​ ಮೇಲೆ ಉಗ್ರರು ಗುರುವಾರ ದಾಳಿ ನಡೆಸಿದ್ದಾರೆ. ಕನಿಷ್ಠ ನಾಲ್ವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ದಾರಾಬನ್ ಪ್ರದೇಶದ ಚೆಕ್‌ಪೋಸ್ಟ್‌ನಲ್ಲಿ ದಾಳಿ ನಡೆದಾಗ ಭದ್ರತಾ ಸಿಬ್ಬಂದಿ ದಾಳಿ​ ಮಾಡಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಯೋಧರ ಹೊಸ ತುಕಡಿ ದಾಳಿಕೋರರನ್ನು ಬಂಧಿಸಲು ಬೃಹತ್​ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸದ್ಯ ದಾಳಿಯ ಹೊಣೆಯನ್ನು ಇದುವರೆಗೆ ಯಾವುದೇ ಗುಂಪು ಹೊತ್ತುಕೊಂಡಿಲ್ಲ.

ಇದನ್ನೂ ಓದಿ:ಇಸ್ರೇಲ್ ನಾಗರಿಕರು, ವಿದೇಶಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಸಾಧ್ಯತೆ: ಶ್ರೀಲಂಕಾದಲ್ಲಿ ಕಟ್ಟೆಚ್ಚರ

ABOUT THE AUTHOR

...view details