ನ್ಯೂಯಾರ್ಕ್(ಅಮೆರಿಕ): ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ಗುರುವಾರ ಖಚಿತಪಡಿಸಿದೆ. ಶ್ರೇಯಸ್ ರೆಡ್ಡಿ ಬೆನಿಗೇರಿ ಮೃತಪಟ್ಟ ವಿದ್ಯಾರ್ಥಿ. ಇವರು ಸಿನ್ಸಿನಾಟಿಯ ಲಿಂಡ್ನರ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ನ್ಯೂಯಾರ್ಕ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣದಲ್ಲಿ ಯಾವುದೇ ಕೈವಾಡದ ಶಂಕೆ ಸದ್ಯಕ್ಕಿಲ್ಲ. ಶ್ರೇಯಸ್ ರೆಡ್ಡಿ ಸಾವು ಅತೀವ ದುಃಖ ತಂದಿದೆ ಎಂದು ಕಾನ್ಸುಲೇಟ್ ಜನರಲ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.