ರೊಚೆಸ್ಟರ್:ನ್ಯೂಯಾರ್ಕ್‌ನ ರೊಚೆಸ್ಟರ್ನಲ್ಲಿನ ಪಾರ್ಕ್ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಓರ್ವ ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ಸಂಜೆ 6.20ರ ಸುಮಾರಿಗೆ ನೆರೆದಿದ್ದ ಜನರ ಮೇಲೆ ವ್ಯಕ್ತಿಯೋರ್ವ ಏಕಾಏಕಿ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ 20 ವರ್ಷದ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಐವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾವನ್ನಪ್ಪಿದ ವ್ಯಕ್ತಿ ಮತ್ತು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸಿಲ್ಲ. ದಾಳಿ ನಡೆದ ಸಮಯದಲ್ಲಿ ಪಾರ್ಕ್ನಲ್ಲಿ ಸಂತೋಷಕೂಟ ನಡೆಯುತ್ತಿತ್ತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.