ಇಸ್ಲಾಮಾಬಾದ್ (ಪಾಕಿಸ್ತಾನ):ಪಾಕಿಸ್ತಾನದ ಉತ್ತರ ವಜೀರಿಸ್ತಾನದ ರಜ್ಮಾಕ್ ಬಜಾರ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಮೂಲದ ARY ನ್ಯೂಸ್ ವರದಿ ಮಾಡಿದೆ. ಮೋಟಾರ್‌ಸೈಕಲ್‌ನಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸಿಡಿದು ಈ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ನಾಲ್ವರು ಸಾವು, 10 ಮಂದಿ ಗಾಯ - Bomb Blast - BOMB BLAST
ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ (File)
By ANI
Published : Aug 26, 2024, 9:06 PM IST
ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಪ್ರದೇಶವನ್ನು ಸುತ್ತುವರೆದಿರುವ ಭದ್ರತಾ ಪಡೆಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ. ಯಾವುದೇ ಗುಂಪು ಅಥವಾ ವ್ಯಕ್ತಿ ಈ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ.
ಇದನ್ನೂ ಓದಿ:ಬಸ್ನಿಂದ ಇಳಿಸಿ 23 ಜನರನ್ನು ಬರ್ಬರವಾಗಿ ಗುಂಡಿಕ್ಕಿ ಕೊಂದ ಭಯೋತ್ಪಾದಕರು! - 23 people killed in pakistan