ಮಾಸ್ಕೋ: ರಷ್ಯಾ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವ ವಾಡ್ಲಿಮಿರ್ ಪುಟಿನ್ ಮೂರನೇ ಮಹಾಯುದ್ಧದ ಎಚ್ಚರಿಕೆ ನೀಡಿದ್ದಾರೆ. ಉಕ್ರೇನ್ನಲ್ಲಿ ಸೇನೆ ನಿಯೋಜಿಸಲು ಅಮೆರಿಕ ನೇತೃತ್ವದಲ್ಲಿ ನ್ಯಾಟೋ ಮುಂದಾದಲ್ಲಿ ಪೂರ್ಣ ಪ್ರಮಾಣದಲ್ಲಿ ಮೂರನೇ ಮಹಾಯುದ್ಧಕ್ಕೆ ಸಜ್ಜಾಗುವುದಕ್ಕೆ ನಾವು ಹಿಂಜರಿಯಲಾರೆವು ಎಂದು ಹೇಳಿದ್ದಾರೆ.
ಅಧ್ಯಕ್ಷೀಯ ಚುನಾವಣೆ ಗೆದ್ದ ಬಳಿಕ ಮಾತನಾಡಿದ ಅವರು, ಈಗಾಗಲೇ ಉಕ್ರೇನ್ನಲ್ಲಿ ನ್ಯಾಟೋ ಪಡೆಗಳು ಕಾರ್ಯಾಚರಣೆ ಮಾಡುತ್ತಿರುವುದು ರಹಸ್ಯವಾಗಿ ಉಳಿದಿಲ್ಲ. ಉಕ್ರೇನ್ನಲ್ಲಿ ಅಮೆರಿಕ ನೇತೃತ್ವದ ಮಿಲಿಟರಿ ಪಡೆಗಳನ್ನು ನಿಯೋಜಿಸುವ ಕುರಿತು ಮಾಸ್ಕೋಗೆ ಅರಿವಿದೆ ಎಂದು ತಿಳಿಸಿದ್ದಾರೆ.
ರಷ್ಯಾ-ಉಕ್ರೇನ್ ಯುದ್ಧದ ವಿಚಾರವಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಈ ಹಿಂದಿನ ಹೇಳಿಕೆಗೆ ಪ್ರತಿಕ್ರಿಯಿಸಿದ ಪುಟಿನ್, ಆಧುನಿಕ ಜಗತ್ತಿನಲ್ಲಿ ಎಲ್ಲವೂ ಸಾಧ್ಯವಿದೆ. ಎಲ್ಲರಿಗೂ ಇದು ತಿಳಿದಿದೆ. ಮೂರನೇ ಮಹಾಯುದ್ಧಕ್ಕೆ ಒಂದೇ ಹೆಜ್ಜೆ ದೂರದಲ್ಲಿದ್ದೇವೆ. ಆದರೆ ಇದರಲ್ಲಿ ಯಾರಿಗಾದರೂ ಆಸಕ್ತಿ ಇದೆ ಎಂದು ನಾನು ಭಾವಿಸುವುದಿಲ್ಲ ಎಂದರು.