ಸೋಮವಾರದಂದು ಅಯೋಧ್ಯೆಯ ರಾಮಮಂದಿರದಲ್ಲಿ 'ರಾಮಲಲ್ಲಾ' ಪ್ರಾಣ ಪ್ರತಿಷ್ಠಾಪನೆಗೊಂಡಿದೆ. ಅದೇ ಮೂಹರ್ತದಲ್ಲಿ ಆಂಜನೇಯನ ಜನ್ಮಭೂಮಿ ಅಂಜನಾದ್ರಿಯಲ್ಲಿ "ಅಯೋಧ್ಯಾ ರಾಮ" ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಡಾ. ಮಧುಸೂದನ್ ಹವಾಲ್ದಾರ್ ಅವರ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ವಿಕ್ರಮ್ ಜೋಶಿ, ಶ್ರೀಲತಾ ನಟನೆಯ ಈ ಚಿತ್ರವನ್ನು 12 ಭಾಷೆಗಳಲ್ಲಿ ಬಿಡುಗಡೆಗೊಳಿಸುವ ಯೋಜನೆಯನ್ನು ಚಿತ್ರತಂಡ ಹೊಂದಿದೆ.