ಕರ್ನಾಟಕ

karnataka

ETV Bharat / spiritual

ಆಷಾಢ ಶುಕ್ರವಾರ: ಚಾಮುಂಡೇಶ್ವರಿಗೆ ನಿಂಬೆ ಹಣ್ಣಿನ ಆರತಿ ಬೆಳಗಿದ ಮಹಿಳೆಯರು - Ashadha Friday - ASHADHA FRIDAY

ಆಷಾಢ ಶುಕ್ರವಾರ ಹಿನ್ನೆಲೆ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಮಹಿಳೆಯರು, ಯುವತಿಯರು ಇಂದು ಚಾಮುಂಡೇಶ್ವರಿ ದೇವಿಗೆ ನಿಂಬೆಹಣ್ಣಿನ ಆರತಿ ಬೆಳಗಿದರು.

Ashadha Friday celebration in Chamarajeshwara Temple Chamarajanagara
ಚಾಮುಂಡೇಶ್ವರಿಗೆ ನಿಂಬೆಹಣ್ಣಿನ ಆರತಿ ಬೆಳಗಿದ ಮಹಿಳೆಯರು (ETV Bharat)

By ETV Bharat Karnataka Team

Published : Jul 12, 2024, 3:44 PM IST

Updated : Jul 12, 2024, 4:15 PM IST

ಚಾಮರಾಜನಗರ: ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಐತಿಹಾಸಿಕ ದೇವಾಲಯ ಚಾಮರಾಜನಗರದ ಚಾಮರಾಜೇಶ್ವರ ದೇಗುಲದಲ್ಲಿ ಚಾಮುಂಡೇಶ್ವರಿ ದೇವಿಗೆ ಸಹಸ್ರಾರು ಮಹಿಳೆಯರು ನಿಂಬೆಹಣ್ಣಿನ ಆರತಿ ಬೆಳಗಿದರು.

ಚಾಮುಂಡೇಶ್ವರಿಗೆ ನಿಂಬೆಹಣ್ಣಿನ ಆರತಿ ಬೆಳಗಿದ ಮಹಿಳೆಯರು (ETV Bharat)

ಆಷಾಢ ಶುಕ್ರವಾರದಂದು ನಿಂಬೆಹಣ್ಣಿನ ಆರತಿ ಬೆಳಗಿದರೇ ಇಷ್ಟಾರ್ಥ ಸಿದ್ಧಿ, ಕಂಕಣ ಭಾಗ್ಯ ಕೂಡಿ ಬರಲಿದೆ ಎಂಬ ನಂಬಿಕೆ ಇದೆ. ಈಶ್ವರ ಅಭಿಷೇಕ ಪ್ರಿಯನಾದರೆ, ವಿಷ್ಣು ಅಲಂಕಾರ ಪ್ರಿಯ. ಆದೇ ರೀತಿ ಚಾಮುಂಡೇಶ್ವರಿ ದೇವಿ ಸ್ತೋತ್ರ ಪ್ರಿಯಳಾಗಿದ್ದಾಳೆ. ಆಷಾಢ ಮಾಸದಲ್ಲಿ ದೇವಿಯನ್ನು ಸ್ಮರಿಸಿ ಸ್ತೋತ್ರ ಹೇಳಿದರೆ ದೇವಿ ನಮ್ಮೆಲ್ಲಾ ಕಷ್ಟಗಳನ್ನು ದೂರ ಮಾಡುತ್ತಾಳೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಸಹಸ್ರಾರು ಮಹಿಳೆಯರು, ಯುವತಿಯರು ಚಾಮುಂಡೇಶ್ವರಿಗೆ ನಿಂಬೆಹಣ್ಣಿನ‌ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು.

ಚಾಮುಂಡೇಶ್ವರಿಗೆ ನಿಂಬೆಹಣ್ಣಿನ ಆರತಿ ಬೆಳಗಿದ ಮಹಿಳೆಯರು (ETV Bharat)

ಇನ್ನೂ ಕೆಲವರು ಸೇಬು, ನಿಂಬೆ, ಕಿತ್ತಲೆ ಸೇರಿದಂತೆ ವಿವಿಧ ಬಗೆಯ ಹಣ್ಣಿನ ಹಾರ ತಯಾರಿಸಿ ದೇವರಿಗೆ ಅರ್ಪಿಸುತ್ತಾರೆ. ನಿಂಬೆಹಣ್ಣಿಗೆ ಆಕರ್ಷಣಾ ಶಕ್ತಿ ಹೆಚ್ಚು. ಹೀಗಾಗಿ ನಿಂಬೆಹಣ್ಣನ್ನು ದೇವತಾ ಪಾದಕ್ಕೆ ಹಿಂಡಿ ಅದರ ಸಿಪ್ಪೆಯಿಂದ ದೀಪ ತಯಾರಿಸಿ, ಆರತಿ ಮಾಡಿದರೆ ಸಕಲ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬ ನಂಬಿಕೆ ತಲೆ ತಲಾಂತರದಿಂದ ನಡೆದುಕೊಂಡು ಬಂದಿದೆ.

ಚಾಮುಂಡೇಶ್ವರಿಗೆ ನಿಂಬೆಹಣ್ಣಿನ ಆರತಿ ಬೆಳಗಿದ ಮಹಿಳೆಯರು (ETV Bharat)

ಇದನ್ನೂ ಓದಿ:ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಅಧಿದೇವತೆ - First Ashada Friday

Last Updated : Jul 12, 2024, 4:15 PM IST

ABOUT THE AUTHOR

...view details