ನವದೆಹಲಿ: ಫೆಬ್ರವರಿ ತಿಂಗಳಲ್ಲಿ ಪ್ರಾರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಶನಿವಾರ (ಇಂದು) ಭಾರತ ತಂಡ ಪ್ರಕಟಗೊಂಡಿದೆ. ವೇಗದ ಬೌಲರ್ ಮೊಹಮ್ಮದ ಶಮಿ ಮತ್ತು ಜಸ್ಪ್ರಿತ್ ಬುಮ್ರಾ ಸೇರಿ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಭಾರತ ತಂಡವನ್ನು ಪ್ರಕಟಿಸಿದೆ
ಈ ಮಹತ್ವದ ಸರಣಿಯಲ್ಲಿ ಭಾರತ ಸೇರಿ ಒಟ್ಟು 8 ತಂಡಗಳು ಭಾಗಿಯಾಗುತ್ತಿದ್ದು, ಪಾಕಿಸ್ತಾನ ಹೊರತು ಪಡಿಸಿ ಎಲ್ಲಾ ತಂಡಗಳು ಪ್ರಕಟಗೊಂಡಿವೆ. ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಪ್ರಾರಂಭವಾಗಲಿದೆ. ಪಾಕಿಸ್ತಾನ ಆತಿಥ್ಯ ವಹಿಸಿಕೊಂಡಿರುವ ಈ ಟೂರ್ನಿಯಲ್ಲಿ ಭಾರತ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಗಳನ್ನು ಆಡಲಿದೆ.
ಭಾರತ ಆಡುವ ಪಂದ್ಯಗಳು ದುಬೈನಲ್ಲಿ ನಡೆಯಲಿದ್ದು ಪಂದ್ಯಗಳ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಭಾರತ ತನ್ನ ಮೊದಲ ಪಂದ್ಯ ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ಆಡಲಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.
ಎ ಗುಂಪಿನಲ್ಲಿ ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್, ಬಾಂಗ್ಲಾದೇಶ ತಂಡಗಳಿದ್ದರೇ ಬಿ ಗುಂಪಿನಲ್ಲಿ ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ ತಂಡಗಳಿವೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ ಕೂಡ ಕಮ್ಬ್ಯಾಕ್ ಮಾಡಿದ್ದಾರೆ .
ಏತನ್ಮದ್ಯೆ, ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ಮುಂಬೈನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಇಂಗ್ಲೆಂಡ್ ವಿರುದ್ಧ ಮೂರು ಏಕದಿನ ಸರಣಿಗಾಗಿ ಹದಿನೈದು ಆಟಗಾರರ ಬಲಿಷ್ಠ ತಂಡವನ್ನು ಪ್ರಕಟಿಸಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಷಬ್ ಪಂತ್, ಕೆಎಲ್ ರಾಹುಲ್, ಕುಲ್ದೀಪ್ ಯಾದವ್.
ಕರುಣ್ ನಾಯರ್ಗಿಲ್ಲ ಸ್ಥಾನ:ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಅತ್ಯದ್ಭುತ್ ಫಾರ್ಮ್ನಲ್ಲಿ ಮುಂದುವರೆದಿರುವ ಕನ್ನಡಿಗ ಕರುಣ್ ನಾಯರ್ ಸ್ಕ್ವಾಡ್ನಲ್ಲಿ ಅವಕಾಶ ಸಿಗುತ್ತದೆ ಎಂದೇ ಭಾವಿಸಲಾಗಿತ್ತು. ಆದರೆ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ. ಇದಕ್ಕೆ ಅಜಿತ್ ಅಗರ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸಧ್ಯ ಆಯ್ಕೆ ತಂಡದಲ್ಲಿ ಬ್ಯಾಟರ್ಗಳು 40ರ ಸರಾಸರಿ ಹೊಂದಿದ್ದಾರೆ ಇಂತಹ ಸಂದರ್ಭದಲ್ಲಿ ಅವರನ್ನು ಆಯ್ಕೆ ಮಾಡುವುದು ಹೇಗೆ ಸಾಧ್ಯ. ಅಲ್ಲದೇ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಬಗ್ಗೆಯೂ ಚರ್ಚೆಗಳು ಮಾತುಗಳು ಆಗಿದ್ದವು ಎಂದಿದ್ದಾರೆ. ಜೊತೆಗೆ ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ವಾಲ್ಗೂ ಭಾರೀ ನಿರಾಸೆ ಮೂಡಿಸದೆ.
ಇದನ್ನೂ ಓದಿ:ಸಂಸದೆ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್!: ಸತ್ಯಾಸತ್ಯತೆ ಏನು?