ನವದೆಹಲಿ: ಭಾರತದ ಅತ್ಯಂತ ಯಶಸ್ವಿ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್ ಅವರು ಇಂದು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ತಮ್ಮ ಕುಸ್ತಿ ಅಭಿಯಾನವನ್ನು ಆರಂಭಿಸಲಿದ್ದಾರೆ. ವಿನೇಶ್ ಮೂರನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿದ್ದು, 50 ಕೆಜಿ ಸ್ಪರ್ಧೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
2022ರ ವಿಶ್ವ ಚಾಂಪಿಯನ್‌ಶಿಪ್‌ನ ನಂತರ ಇದು ಅವರ ಮೊದಲ ಅಂತಾರಾಷ್ಟ್ರೀಯ ಸ್ಪರ್ಧೆಯಾಗಿದೆ. ವಿಶ್ವ ಚಾಂಪಿಯನ್ ಶಿಪ್ನಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಫೋಗಟ್ ಕಂಚಿನ ಪದಕ ಗೆದ್ದುಕೊಂಡಿದ್ದರು. ಇತ್ತೀಚೆಗೆ, ಜುಲೈ 6 ರಂದು ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್‌ನಲ್ಲಿ ಚಿನ್ನದ ಪದಕವನ್ನೂ ಗೆದ್ದಿದ್ದರು, ಫೈನಲ್‌ನಲ್ಲಿ ಮರಿಯಾ ಟೈಮೆರ್ಕೊವಾ ಅವರನ್ನು 10-5 ರಿಂದ ಸೋಲಿಸಿ ಪದಕ ವಶಪಡಿಸಿಕೊಂಡಿದ್ದರು.
ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ವಿನೇಶ್ ಫೋಗಟ್ ಅವರ ಮೊದಲ ಪಂದ್ಯ ಕಠಿಣವಾಗಿರಲಿದೆ. 50 ಕೆಜಿ ವಿಭಾಗದಲ್ಲಿ ಅತ್ಯುತ್ತಮ ಕುಸ್ತಿಪಟುಗಳಲ್ಲಿ ಒಬ್ಬರಾಗಿರುವ ಮತ್ತು ಇಲ್ಲಿಯವರೆಗೆ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಸೋಲನ್ನೇ ಕಾಣದ ಜಪಾನ್‌ನ ಯುಯಿ ಸುಸಾಕಿ ಅವರ ವಿರುದ್ಧ ಮೊದಲ ಪಂದ್ಯ ನಡೆಯಲಿದೆ. ಯುಯಿ ನುಸಾಕಿ ಹಾಲಿ ಒಲಿಂಪಿಕ್ ಚಾಂಪಿಯನ್ ಕೂಡ ಆಗಿದ್ದಾರೆ. ಕಳೆದ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಒಂದೇ ಒಂದು ಸೋಲನ್ನು ಕಾಣದೇ ಚಿನ್ನದ ಪದಕ ಗೆದ್ದುಕೊಂಡಿದ್ದರು. ಹೀಗಿರುವಾಗ ವಿನೇಶ್‌ಗೆ ಈ ಪೈಪೋಟಿ ಸವಾಲಾಗಿ ಪರಿಣಮಿಸಿದೆ.
ಯುಯಿ ಸುಸಾಕಿ 2017, 2018, 2022 ಮತ್ತು 2023 ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲಿ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಪ್ಯಾರಿಸ್‌ನಲ್ಲಿ ಚಿನ್ನದ ಪದಕ ಗೆಲ್ಲಲು ಸುಸಾಕಿ ಕೂಡ ಪ್ರಬಲ ಸ್ಪರ್ಧಿಯಾಗಿದ್ದಾರೆ. 2020 ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ಕುಸ್ತಿ ಸ್ಪರ್ಧೆಯಲ್ಲಿ ಒಂದೇ ಒಂದು ಸೋಲು ಕಾಣದೇ ಚಿನ್ನದ ಪದಕವನ್ನು ಗೆದ್ದಿರುವುದು ಸುಸಾಕಿ ಅವರ ಅತ್ಯಂತ ಗಮನಾರ್ಹ ಸಾಧನೆಯಾಗಿದೆ. ಅವರು ಅಂಡರ್ 23 ಮತ್ತು ಸೀನಿಯರ್ ವರ್ಲ್ಡ್ ಚಾಂಪಿಯನ್‌ಶಿಪ್‌ಗಳನ್ನು ಒಳಗೊಂಡಂತೆ ಹಲವಾರು ವಿಶ್ವ ಚಾಂಪಿಯನ್‌ಶಿಪ್‌ಗಳನ್ನು ಗೆದ್ದಿದ್ದಾರೆ ಮತ್ತು ವಿಶ್ವದ ಮೊದಲ ಕುಸ್ತಿ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.
ಇದನ್ನು ಓದಿ:ಒಂದೇ ಅಂಕದಿಂದ ಕಂಚು ಮಿಸ್! ಶೂಟಿಂಗ್ ಸ್ಕೀಟ್‌ನಲ್ಲೂ ಭಾರತ ಪರಾಜಯ - Olympics Skeet Shootingಇಂದಿನಿಂದ ಭಾರತದ ಒಲಿಂಪಿಕ್ಸ್ ಕುಸ್ತಿ ಆರಂಭ: ಇವರಿಂದ ಚಿನ್ನದ ಪದಕ ನಿರೀಕ್ಷೆ - Olympics Wrestling