Border Gavaskar Trophy India squad:ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ ಇಬ್ಬರು ಕನ್ನಡಿಗರಿಗೆ ಚಾನ್ಸ್ ನೀಡಲಾಗಿದೆ.
ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ತಂಡ ಆಸ್ಟ್ರೇಲಿಯಾಗೆ ಪ್ರವಾಸ ಬೆಳಸಲಿದೆ. ನವೆಂಬರ್ 22 ರಿಂದ ಉಭಯ ತಂಡಗಳ ನಡುವೆ ಟೆಸ್ಟ್ ಸರಣಿ ಪ್ರಾರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಆತಿಥೇಯ ತಂಡದ ವಿರುದ್ಧ 5 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಬಿಸಿಸಿಐ ಪ್ರಕಟಿಸಿರುವ ತಂಡದಲ್ಲಿ ಕರ್ನಾಟಕದ ಕೆ.ಎಲ್ ರಾಹುಲ್ ಮತ್ತು ಪ್ರಸಿದ್ಧ ಕೃಷ್ಣರನ್ನು ಆಯ್ಕೆ ಮಾಡಲಾಗಿದೆ
ರಾಹುಲ್ಗೆ ಮತ್ತೊಂದು ಚಾನ್ಸ್:ಕರ್ನಾಟಕದ ಸ್ಟಾರ್ ಬ್ಯಾಟರ್ ಕೆ.ಎಲ್ ರಾಹುಲ್ ಇತ್ತೀಚಿನ ದಿನಗಳಲ್ಲಿ ಹೇಳಿಕೊಳ್ಳುವ ಪ್ರದರ್ಶನ ನೀಡುತ್ತಿಲ್ಲ. ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಸರಣಿ ಮತ್ತು ಪ್ರಸ್ತುತ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್ನಲ್ಲೂ ಹೇಳಿಕೊಳ್ಳುವ ಪ್ರದರ್ಶನ ನೀಡಿರಲಿಲ್ಲ. ಇದರಿಂದಾಗಿ ರಾಹುಲ್ ಅವರನ್ನು ಎರಡನೇ ಟೆಸ್ಟ್ನಿಂದ ಕೈ ಬಿಡಲಾಗಿದೆ. ಆದರೆ, ವಿದೇಶಿ ನೆಲದಲ್ಲಿ ರಾಹುಲ್ ಉತ್ತಮ ದಾಖಲೆ ಹೊಂದಿರುವ ಕಾರಣ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಭಾರತ ತಂಡ:ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ.