ಬೆಂಗಳೂರು: ನಗರದ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಿರ್ಣಾಯಕ ಪಂದ್ಯ ನಡೆಯುತ್ತಿದೆ. ಈ ಹೈವೋಲ್ಟೇಜ್ ಪಂದ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ, ನಟ ಡಾ.ಶಿವರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ವೀಕ್ಷಿಸಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಎಂ ಸಿದ್ಧರಾಮಯ್ಯ ಆರ್ಸಿಬಿ ಮತ್ತು ಸಿಎಸ್ಕೆ ಪಂದ್ಯ ವೀಕ್ಷಿಸಿದರು. (ETV Bharat) ಪ್ರಸ್ತುತ ಐಪಿಎಲ್ ಟೂರ್ನಿಯ ಮಹತ್ವದ ಟೂರ್ನಿಯಲ್ಲಿ ಆರ್ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್ಕೆ ಬೌಲಿಂಗ್ ಆಯ್ದುಕೊಂಡಿದೆ. ಇದರಿಂದ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, ಈ ಪಂದ್ಯವನ್ನ ಸಿಎಂ ಸಿದ್ದರಾಮಯ್ಯ ವೀಕ್ಷಿಸಿದರು. ಸಿಎಂ ಅವರಿಗೆ ಸಚಿವ ಎಚ್.ಸಿ.ಮಹಾದೇವಪ್ಪ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸಾಥ್ ನೀಡಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂಗೆ ಆರ್ಸಿಬಿ ಮತ್ತು ಸಿಎಸ್ಕೆ ಪಂದ್ಯ ವೀಕ್ಷಣೆ ಬಂದಿರುವ ಸಿಎಂ ಸಿದ್ಧರಾಮಯ್ಯ. (ETV Bharat) ಇದೇ ವೇಳೆ, ಪಂದ್ಯದ ವೀಕ್ಷಣೆಗೆ ಆಗಮಿಸಿರುವ ನಟ ಡಾ.ಶಿವರಾಜ್ ಕುಮಾರ್ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿದರು. ಆರ್ಸಿಬಿ ಮತ್ತು ಸಿಎಸ್ಕೆ ಎರಡೂ ತಂಡಗಳಿಗೂ ಪ್ಲೇ ಆಫ್ಗೆ ಪ್ರವೇಶಿಸಲು ಇಂದು ಗೆಲುವು ಅನಿವಾರ್ಯವಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂಗೆ ಆರ್ಸಿಬಿ ಮತ್ತು ಸಿಎಸ್ಕೆ ಪಂದ್ಯ ವೀಕ್ಷಣೆ ಬಂದಿರುವ ಸಿಎಂ ಸಿದ್ಧರಾಮಯ್ಯ. (ETV Bharat) ಆದ್ದರಿಂದ ಪಂದ್ಯವು ಕ್ರಿಕೆಟ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಜೊತೆಗೆ ಎರಡು ಪ್ರಮುಖ ತಂಡಗಳ ನಡುವೆ ಹಣಾಹಣಿ ನಡೆಯುತ್ತಿರುವುದರಿಂದ ಪಂದ್ಯ ರೋಚಕತೆಯಿಂದ ಕೂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಭಿಮಾನಿಗಳ ಸಾಗರವೇ ಹರಿದು ಬಂದಿದೆ.
ಇದನ್ನೂ ಓದಿ:ಆರ್ಸಿಬಿ vs ಸಿಎಸ್ಕೆ ಹೈವೋಲ್ಟೇಜ್ ಪಂದ್ಯ: ಕ್ರೀಡಾಂಗಣದ ಹೊರಗೆ ಅಭಿಮಾನಿಗಳು ಏನಂದ್ರು?