ನವದೆಹಲಿ:ಅಜಿತ್ ಅಗರ್ಕರ್ ನೇತೃತ್ವದ ಪುರುಷರ ಕ್ರಿಕೆಟ್ ಆಯ್ಕೆ ಸಮಿತಿ 2024-25ರ ದುಲೀಪ್ ಟ್ರೋಫಿಯ ಮೊದಲ ಸುತ್ತಿನ ತಂಡಗಳನ್ನು ಬುಧವಾರ ಪ್ರಕಟಿಸಿದೆ. ಈ ಪಂದ್ಯಾವಳಿಯಲ್ಲಿ ಅಂತಾರಾಷ್ಟ್ರೀಯ ಆಟಗಾರರು, ಕೆಲವು ಯುವ ಮತ್ತು ಉದಯೋನ್ಮುಖ ಪ್ರತಿಭೆಗಳೂ ಆಡುವರು. ಆಂಧ್ರಪ್ರದೇಶದ ಅನಂತಪುರ ಮತ್ತು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 5, 2024ರಂದು ಪಂದ್ಯಗಳು ನಡೆಯಲಿವೆ.
ಆಯ್ಕೆ ಸಮಿತಿ ಪ್ರಕಟಿಸಿದ ನಾಲ್ಕು ತಂಡಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಹೆಸರುಗಳಿಲ್ಲ.
ಇನ್ನು, ಈ ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರು ಸೆಪ್ಟೆಂಬರ್ 19ರಿಂದ ಪ್ರಾರಂಭವಾಗುವ ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಅವಕಾಶ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಮೊದಲ ಸುತ್ತಿನ 4 ತಂಡಗಳು ಇಂತಿವೆ:
ಎ ತಂಡ:ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್, ಕೆ.ಎಲ್.ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹಮದ್, ಅವೇಶ್ ಖಾನ್, ವಿದ್ವತ್ ಕವರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.
ಬಿ ತಂಡ: ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್, ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಾಹರ್, ಆರ್.ಸಾಯಿ ಕಿಶೋರ್, ಮೋಹಿತ್ ಅವಸ್ತಿ, ಎನ್.ಜಗದೀಸನ್ (ವಿಕೆಟ್ ಕೀಪರ್).
ಸಿ ತಂಡ:ರುತುರಾಜ್ ಗಾಯಕ್‌ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಬಿ.ಇಂದರ್‌ಜೀತ್, ಹೃತಿಕ್ ಶೌಕೀನ್, ಮಾನವ್ ಸುತಾರ್, ಉಮ್ರಾನ್ ಮಲಿಕ್, ವಿಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಮರ್ಕಂಡೆ, ಮಯಾನ್ ಜುಕಾಂಡೆ, (ವಿಕೆಟ್ ಕೀಪರ್), ಸಂದೀಪ್ ವಾರಿಯರ್.
ಡಿ ತಂಡ:ಶ್ರೇಯಸ್ ಲೈರ್ (ನಾಯಕ), ಅಥರ್ವ ತಾಯ್ಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷ್‌ದೀಪ್ ಸಿಂಗ್, ಆದಿತ್ಯ ಠಾಕ್ರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೆಂಗುಪ್ತ, ಕೆ.ಎಸ್.ಭರತ್ (ವಿಕೆಟ್ ಕೀಪರ್), ಸೌರಭ್ ಕುಮಾರ್.
ಇದನ್ನೂ ಓದಿ:ಇವರೇ ನೋಡಿ ಭಾರತ ಕ್ರಿಕೆಟ್ ತಂಡದ ಹೊಸ ಬೌಲಿಂಗ್ ಕೋಚ್ - Team India Bowling Coach