ನವದೆಹಲಿ: ಟೀಂ ಇಂಡಿಯಾದ ಮಾಜಿ ಬಲಗೈ ಬ್ಯಾಟರ್ ಕಮ್ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರು ಹನ್ನೊಂದು ಸದಸ್ಯರ ಸಾರ್ವಕಾಲಿಕ ಭಾರತ ಕ್ರಿಕೆಟ್ ತಂಡ ಆಯ್ಕೆ ಮಾಡಿದ್ದಾರೆ. ಆದರೆ ಈ ತಂಡದಿಂದ ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್.ಧೋನಿ ಅವರನ್ನು ಕೈಬಿಟ್ಟಿದ್ದಾರೆ. 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ದಿನೇಶ್ ಕಾರ್ತಿಕ್ ಕ್ರಿಕ್‌ಬಜ್‌ನಲ್ಲಿ ಎಲ್ಲಾ ಸ್ವರೂಪಗಳಲ್ಲಿ 11 ಆಟಗಾರರೊಂದಿಗೆ ತಮ್ಮ ತಂಡವನ್ನು ಘೋಷಿಸಿದರು.
ಡಿಕೆ ಪ್ರಕಟಿಸಿರುವ ತಂಡದಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ಹಾಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಸ್ಥಾನ ಪಡೆದಿಲ್ಲ. ತಂಡದ ಪ್ರಸ್ತುತ ಹಿರಿಯರ ತಂಡದಿಂದ 5 ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಇದೇ ವೇಳೆ 12ನೇ ಆಟಗಾರನಾಗಿ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ಗೂ ಸ್ಥಾನ ನೀಡಿದ್ದಾರೆ. ಆದಾಗ್ಯೂ, ಪ್ಲೇಯಿಂಗ್-11 ರಲ್ಲಿ ಅವರು ನಾಯಕ ಮತ್ತು ವಿಕೆಟ್ ಕೀಪರ್ ಅನ್ನು ಉಲ್ಲೇಖಿಸಿಲ್ಲ.
ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್ ಅವರನ್ನು ಡಿಕೆ ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಆಯ್ಕೆ ಮಾಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಅವರನ್ನು ಸೇರಿಸಲಾಗಿದೆ. ಆಲ್ ರೌಂಡರ್ಗಳಾಗಿ ಯುವರಾಜ್ ಸಿಂಗ್ ಮತ್ತು ರವೀಂದ್ರ ಜಡೇಜಾಗೆ ಸ್ಥಾನ ನೀಡಿದ್ದಾರೆ. ರವಿಚಂದ್ರನ್ ಅಶ್ವಿನ್ ಮತ್ತು ಅನಿಲ್ ಕುಂಬ್ಳೆ ಸ್ಪಿನ್ನರ್ ವಿಭಾಗದಲ್ಲಿದ್ದು, ಜಸ್ಪ್ರೀತ್ ಬುಮ್ರಾ ಮತ್ತು ಜಹೀರ್ ಖಾನ್ ವೇಗದ ಬೌಲರ್‌ಗಳಾಗಿದ್ದಾರೆ. ಇದಲ್ಲದೇ 12ನೇ ಸ್ಥಾನಲ್ಲಿ ಹರ್ಭಜನ್ ಸಿಂಗ್ ಅವರನ್ನು ಆಯ್ಕೆ ಮಾಡಿದ್ದಾರೆ.
ಡಿಕೆ ಸಾರ್ವಕಾಲಿಕ ಅತ್ಯುತ್ತಮ ಆಟಗಾರರು:ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅನಿಲ್ ಕುಂಬ್ಳೆ, ಜಸ್ಪ್ರೀತ್ ಬುಮ್ರಾ, ಜಹೀರ್ ಖಾನ್.
ಇದನ್ನೂ ಓದಿ:ಕ್ರಿಕೆಟ್ನಲ್ಲಿ ಹೇಗೆಲ್ಲಾ OUT ಮಾಡಬಹುದು ಗೊತ್ತೇ?: ನೀವು ತಿಳಿದಿರೋದು 5 ಮಾತ್ರ! - Types Of Dismissals In Cricket