ಹೈದರಾಬಾದ್ (ತೆಲಂಗಾಣ): ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್‌ಗೆ (ಎಚ್‌ಸಿಎ) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್‌ಗೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಸಮನ್ಸ್ ಜಾರಿ ಮಾಡಿದೆ.
ಈ ಹಿಂದೆ ಎಚ್‌ಸಿಎ ಅಧ್ಯಕ್ಷರಾಗಿದ್ದ ಅಜರುದ್ದೀನ್ ಅವರ ಅಧಿಕಾರಾವಧಿಯಲ್ಲಿ ಹಣ ದುರುಪಯೋಗ ಆಗಿರುವ ಆರೋಪ ಕೇಳಿ ಬಂದಿದೆ. ಹೈದರಾಬಾದ್‌ನ ಉಪ್ಪಲ್‌ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನಕ್ಕೆ ಜನರೇಟರ್, ಅಗ್ನಿಶಾಮಕ ವ್ಯವಸ್ಥೆ ಸೇರಿದಂತೆ ಇತರ ಉಪಕರಣಗಳ ಖರೀದಿಗಾಗಿ ಮಂಜೂರು ಮಾಡಲಾದ 20 ಕೋಟಿ ರೂ.ಗಳನ್ನು ದುರ್ಬಳಕೆ ಮಾಡಿಕೊಂರಿಡು ಆರೋಪಕ್ಕೆ ಕೇಳಿ ಬಂದಿದ್ದು ಈ ಹಿನ್ನೆಲೆ ಇಡಿ ಮೊದಲ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು ಇಂದು ಇಡಿ ಮುಂದೆ ಹಾಜರಾಗಬೇಕಿದೆ.
ಕಳೆದ ವರ್ಷ ಇಡಿ ತೆಲಂಗಾಣದ ಒಂಬತ್ತು ಸ್ಥಳಗಳಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ದಾಳಿ ನಡೆಸಲಾಗಿತ್ತು. ಇದರಲ್ಲಿ ಎಚ್‌ಸಿಎ ಮಾಜಿ ಅಧಿಕಾರಿಗಳ ನಿವಾಸಗಳೂ ಸೇರಿದ್ದವು. ದಾಳಿ ವೇಳೆ ಇಡಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.