Vinod Kambli: ಭಾರತದ ಮಾಜಿ ದಿಗ್ಗಜ ಕ್ರಿಕೆಟಿಗ ವಿನೋದ್ ಕಾಂಬ್ಳಿ(52) ಅವರ ಆರೋಗ್ಯ ಮತ್ತೆ ಹದಗೆಟ್ಟಿದೆ. ಇಂದು ಅವರನ್ನು ಕುಟುಂಬಸ್ಥರು ಮಹಾರಾಷ್ಟ್ರದ ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಿಸಲಿದ್ದಾರೆ.
ವಿನೋದ್ ಕಾಂಬ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋಗಳು ಮತ್ತು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದನ್ನು ಕಂಡ ಅಭಿಮಾನಿಗಳು ಕಾಂಬ್ಳಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.
ಇತ್ತೀಚೆಗೆ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಕಾಂಬ್ಳಿ ಅವರ ಬಾಲ್ಯದ ಕೋಚ್ ರಮಾಕಾಂತ್ ಅಚ್ರೇಕರ್ ಸ್ಮರಣಾರ್ಥವಾಗಿ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಅಚ್ರೇಕರ್ ಶಿಷ್ಯರಾದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ವಿನೋದ್ ಕಾಂಬ್ಳಿ ಭಾಗವಹಿಸಿದ್ದರು.