ಕರ್ನಾಟಕ

karnataka

ETV Bharat / sports

ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ; ಗೆಲುವಿನಿ ನಿರೀಕ್ಷೆಯಲ್ಲಿ ಸಾತ್ವಿಕ್-ಚಿರಾಗ್ ಜೋಡಿ - ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಮಾರ್ಚ್ 5 ರಿಂದ 10 ರ ವರೆಗೆ ನಡೆಯಲಿರುವ ಫ್ರೆಂಚ್ ಓಪನ್ 2024 ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರರು ಭಾಗವಹಿಸಲಿದ್ದಾರೆ.

Satwiksairaj Rankireddy  Chirag Shetty  French open 2024 badminton  ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ  ಸಾತ್ವಿಕ್ ಚಿರಾಗ್ ಜೋಡಿ
ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ

By ETV Bharat Karnataka Team

Published : Mar 4, 2024, 3:33 PM IST

ಪ್ಯಾರಿಸ್‌: ಕಳೆದ ಮೂರು ಟೂರ್ನಿಗಳಲ್ಲಿ ರನ್ನರ್‌ ಅಪ್‌ ಆಗಿದ್ದ ಭಾರತದ ಪುರುಷರ ಡಬಲ್ಸ್‌ ಜೋಡಿ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಮಂಗಳವಾರ ಇಲ್ಲಿ ಆರಂಭವಾಗಲಿರುವ ಫ್ರೆಂಚ್‌ ಓಪನ್‌ ಸೂಪರ್‌ 750 ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ 2022ರ ಯಶಸ್ಸನ್ನು ಪುನರಾವರ್ತಿಸುವ ನಿರೀಕ್ಷೆಯಲ್ಲಿದ್ದಾರೆ. ವಿಶ್ವದ ನಂಬರ್ ಒನ್ ಜೋಡಿ ಸಾತ್ವಿಕ್ ಮತ್ತು ಚಿರಾಗ್ ನವೆಂಬರ್‌ನಲ್ಲಿ ನಡೆದ ಚೀನಾ ಮಾಸ್ಟರ್ಸ್ ಸೂಪರ್ 750, ಜನವರಿಯಲ್ಲಿ ಮಲೇಷ್ಯಾ ಓಪನ್ ಸೂಪರ್ 1000 ಮತ್ತು ಇಂಡಿಯಾ ಓಪನ್ ಸೂಪರ್ 750 ರಲ್ಲಿ ಅಂತಿಮ ಪಂದ್ಯವನ್ನು ಗೆಲ್ಲಲು ವಿಫಲರಾಗಿದ್ದರು. ಆದರೂ ಈ ಭಾರತೀಯ ಜೋಡಿ ಫ್ರೆಂಚ್ ಓಪನ್‌ನಲ್ಲಿ ಪ್ರಶಸ್ತಿಗಾಗಿ ಪ್ರಬಲ ಸ್ಪರ್ಧಿಗಳಾಗಿ ಹೊರಹೊಮ್ಮುವ ಭರವಸೆಯಲ್ಲಿದ್ದಾರೆ.

ಈ ಸ್ಪರ್ಧೆಯು ಭಾರತದ ಅಗ್ರ ಆಟಗಾರರಿಗೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬ್ಯಾಡ್ಮಿಂಟನ್ ಪಂದ್ಯಗಳನ್ನು ಆಡಲಾಗುವ ಪೋರ್ಟ್ ಡೆ ಲಾ ಚಾಪೆಲ್ಲೆಯಲ್ಲಿರುವ ಅಡೀಡಸ್ ಅರೆನಾವನ್ನು ಅರ್ಥಮಾಡಿಕೊಳ್ಳಲು ಅವಕಾಶ ನೀಡುತ್ತದೆ. ಸಾತ್ವಿಕ್ ಮತ್ತು ಚಿರಾಗ್ 2022 ರಲ್ಲಿ ಫ್ರೆಂಚ್ ಓಪನ್ ಪ್ರಶಸ್ತಿಯನ್ನು ಗೆದ್ದಿದ್ದರು. ಈ ಬಾರಿ ಅವರು ಮಲೇಷ್ಯಾದ ಓಂಗ್ ಯು ಸಿನ್ ಮತ್ತು ಟಿಯೊ ಯೀ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ.

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಅವರಿಗೂ ಈ ಟೂರ್ನಿ ಅತ್ಯಂತ ಮಹತ್ವದ್ದಾಗಿದೆ. ನಾಲ್ಕು ತಿಂಗಳ ಕಾಲ ಹೊರಗಿದ್ದ ಅವರು ಮಲೇಷ್ಯಾದಲ್ಲಿ ಆಡಿದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಪುನರಾಗಮನ ಮಾಡಿದರು. ವಿಶ್ವದ 11ನೇ ಶ್ರೇಯಾಂಕದ ಭಾರತೀಯ ಆಟಗಾರ್ತಿ ಕೆನಡಾದ ಮಿಚೆಲ್ ಲೀ ವಿರುದ್ಧ ಅಭಿಯಾನ ಆರಂಭಿಸಲಿದ್ದಾರೆ. ಅವರು ಸ್ಪರ್ಧೆಯಲ್ಲಿ ಮತ್ತಷ್ಟು ಪ್ರಗತಿ ಸಾಧಿಸಿದರೆ, ಮೂರು ಬಾರಿಯ ಮಾಜಿ ವಿಶ್ವ ಚಾಂಪಿಯನ್ ಸ್ಪೇನ್‌ನ ಕ್ಯಾರೊಲಿನಾ ಮರಿನ್ ಅವರನ್ನು ಎದುರಿಸಬಹುದಾಗಿದೆ.

ಪಿವಿ ಸಿಂಧು

ಪುರುಷರ ಸಿಂಗಲ್ಸ್‌ನಲ್ಲಿ ವಿಶ್ವದ ಏಳನೇ ಶ್ರೇಯಾಂಕದ ಎಚ್‌ಎಸ್ ಪ್ರಣಯ್ ಇಂಡಿಯಾ ಓಪನ್‌ನ ಸೆಮಿಫೈನಲ್‌ಗೆ ಪ್ರವೇಶಿಸಿದ್ದರು ಮತ್ತು ಅವರು ಇಲ್ಲಿ ಅದಕ್ಕಿಂತ ಉತ್ತಮ ಪ್ರದರ್ಶನ ನೀಡಲು ಬಯಸುತ್ತಾರೆ. ಅವರ ಮೊದಲ ಪಂದ್ಯ ಚೀನಾದ ಲು ಗುವಾಂಗ್ ಕ್ಸುಯೆ ವಿರುದ್ಧ ನಡೆಯಲಿದೆ. ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ರೇಸ್‌ನಲ್ಲಿರುವ ಲಕ್ಷ್ಯ ಸೇನ್‌ಗೆ ಕೆಲ ಸಮಯದಿಂದ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅವರು ಮೊದಲ ಸುತ್ತಿನಲ್ಲೇ ಜಪಾನ್‌ನ ಕಾಂತಾ ಸುನೇಯಮಾ ಅವರಿಂದ ಕಠಿಣ ಸವಾಲು ಎದುರಿಸಬೇಕಾಗಿದೆ.

ವಿಶ್ವದ ಮಾಜಿ ನಂಬರ್ ಒನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರು ತಮ್ಮ ಆರಂಭಿಕ ಪಂದ್ಯದಲ್ಲಿ ಚೈನೀಸ್ ತೈಪೆಯ ಚೌ ತಿಯೆನ್ ಚೆನ್ ಅವರಿಂದ ಕಠಿಣ ಸವಾಲನ್ನು ಎದುರಿಸಬಹುದು. ಆದರೆ ಯುವ ಪ್ರಿಯಾಂಶು ರಾಜಾವತ್ ಮೊದಲ ಸುತ್ತಿನಲ್ಲಿ ವಿಶ್ವದ ನಂಬರ್ ಒನ್ ಆಟಗಾರ ವಿಕ್ಟರ್ ಅಕ್ಸೆಲ್ಸೆನ್ ಅವರನ್ನು ಎದುರಿಸಲಿದ್ದಾರೆ. ಮಹಿಳೆಯರ ಡಬಲ್ಸ್‌ನಲ್ಲಿ ಭಾರತದ ಜೋಡಿಗಳಾದ ತ್ರಿಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಮತ್ತು ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಮೊದಲ ಸುತ್ತಿನಲ್ಲಿ ಮುಖಾಮುಖಿಯಾಗಲಿದ್ದಾರೆ.

ಓದಿ:ಐಪಿಎಲ್ 2024: ಸನ್​ರೈಸರ್ಸ್​ ಹೈದರಾಬಾದ್​ಗೆ ಪ್ಯಾಟ್ ಕಮ್ಮಿನ್ಸ್ ನಾಯಕ

ABOUT THE AUTHOR

...view details