ನವದೆಹಲಿ: ಭಾರತ ತಂಡದ ಮಾಜಿ ಆರಂಭಿಕ ಬ್ಯಾಟರ್ ಮತ್ತು ಪ್ರಸ್ತುತ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿರುವ ಗೌತಮ್ ಗಂಭೀರ್ ಇಂದು 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 2003ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಗೌತಿ, ಎಲ್ಲಾ ಮೂರು ಸ್ವರೂಪಗಳಲ್ಲಿ ಆಡಿ ಯಶಸ್ವಿ ಆಟಗಾರನಾದರು. ಅಲ್ಲದೇ ಅನೇಕ ಬಾರಿ ಪ್ರಮುಖ ಪಂದ್ಯಗಳನ್ನು ಗೆಲ್ಲಲು ಸಹಾಯ ಮಾಡಿದ್ದಾರೆ.
ಅದರಲ್ಲೂ 2007ರ T20 ವಿಶ್ವಕಪ್ ಮತ್ತು 2011 ODI ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಗಂಭೀರ್ 2007ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ 75 ರನ್‌ಗಳ ಅದ್ಭುತ ಇನ್ನಿಂಗ್ಸ್ ಗಳಿಸಿದರೆ, 2011ರ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆ ಪಂದ್ಯದಲ್ಲಿ ಗಂಭೀರ್ 97 ರನ್‌ಗಳ ಇನ್ನಿಂಗ್ಸ್ ಆಡಿದ್ದರು. ಇಷ್ಟೆಲ್ಲ ಅದ್ಭುತ ಪ್ರದರ್ಶನ ತೋರಿರುವ ಗಂಭೀರ್ ತಮ್ಮ ಹೆಸರಲ್ಲಿ ಯಾರು ಅಳಿಸಲಾಗದಂತಹ ದಾಖಲೆಯೊಂದನ್ನು ಹೊಂದಿದ್ದಾರೆ.