T20 World Cup Matches Screening:ಇನ್ನೂ ಮೂರು ವಾರಗಳಲ್ಲಿ 2024ರ ಟಿ-20 ವಿಶ್ವಕಪ್ ಆರಂಭವಾಗಲಿದೆ. ಹೀಗಾಗಿ ಐಸಿಸಿ ಟೂರ್ನಿಯ ವ್ಯವಸ್ಥೆಗಳನ್ನು ಚುರುಕುಗೊಳಿಸುತ್ತಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿಯಾಗಿ ಆತಿಥ್ಯ ವಹಿಸಲಿರುವ ಈ ಟೂರ್ನಿಗಾಗಿ ಇಡೀ ಕ್ರೀಡಾ ಜಗತ್ತು ಕುತೂಹಲದಿಂದ ಕಾಯುತ್ತಿದೆ. ಈ ಹಿನ್ನೆಲ್ಲೆಯಲ್ಲಿ ಭಾರತದ ಅತಿ ದೊಡ್ಡ ಸಿನಿಮಾ ಆಪರೇಟರ್ ಕಂಪನಿ 'ಪಿವಿಆರ್ ಸಿನಿಮಾಸ್' ಕ್ರಿಕೆಟ್ ಅಭಿಮಾನಿಗಳಿಗೆ ಹೊಸ ಅನುಭವ ನೀಡಲು ಮುಂದಾಗಿದೆ.
ವಿಶ್ವಕಪ್ ಟೂರ್ನಿಯ ಹಲವು ಪ್ರಮುಖ ಪಂದ್ಯಗಳು ಬೆಳ್ಳಿತೆರೆಯಲ್ಲಿ ನೇರ ಪ್ರಸಾರವಾಗುವ ನಿರೀಕ್ಷೆಯಿದೆ. ಪಿವಿಆರ್ ಸಿನಿಮಾಸ್ ಆಡಳಿತ ಮಂಡಳಿ ಐಸಿಸಿ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ನಿತಿನ್ ಸೂದ್ ಈ ಸಂದರ್ಭದಲ್ಲಿ ಹೇಳಿದರು. ಸದಾ ಪ್ರೇಕ್ಷಕರಿಗೆ ಹತ್ತಿರವಾಗುವುದು ನಮ್ಮ ಉದ್ದೇಶ. ಕಳೆದ ವರ್ಷ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ಗೆ ಭಾರೀ ಪ್ರೇಕ್ಷಕರ ಬೆಂಬಲ ಸಿಕ್ಕಿತ್ತು. ಇದೀಗ ನಡೆಯಲಿರುವ ಟಿ-20 ಟೂರ್ನಿಯು ಏಕದಿನ ಮಾದರಿಗಿಂತ ಕಡಿಮೆ ಅವಧಿಯಲ್ಲಿ ಮುಕ್ತಾಯವಾಗಲಿದೆ. ಇದರೊಂದಿಗೆ ಕಳೆದ ವರ್ಷದ ಏಕದಿನ ವಿಶ್ವಕಪ್‌ಗೆ ಹೋಲಿಸಿದರೆ ಟಿ-20 ಪಂದ್ಯಗಳು ಹೆಚ್ಚು ಜನಪ್ರಿಯತೆಯನ್ನು ಗಳಿಸುತ್ತವೆ ಎಂದು ನಾವು ನಂಬುತ್ತೇವೆ. ದೊಡ್ಡ ಪರದೆಯಲ್ಲಿ ಟಿ20 ಪಂದ್ಯ ವೀಕ್ಷಿಸಲು ಅಪಾರ ಪ್ರೇಕ್ಷಕರು ಖಂಡಿತ ಬರುತ್ತಾರೆ ಎಂದು ನಿತಿನ್ ಅಭಿಪ್ರಾಯಪಟ್ಟಿದ್ದಾರೆ.