ಅಹಮದಾಬಾದ್:ಐಪಿಎಲ್ನ 45ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ವಿರುದ್ಧ 9 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ ಸಾಯಿ ಸುದರ್ಶನ್ (84*) ಅವರ ಅಜೇಯ ಅರ್ಧಶತಕ ಮತ್ತು ಶಾರುಖ್ ಖಾನ್ (58) ಅವರ ವೇಗದ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 200 ರನ್ ಕಲೆ ಹಾಕಿತ್ತು. ಬೆಂಗಳೂರು ಪರ ಸಿರಾಜ್, ಸ್ವೊನೀಲ್ ಸಿಂಗ್, ಮ್ಯಾಕ್ಸ್ವೆಲ್ ತಲಾ ಒಂದು ವಿಕೆಟ್ ಪಡೆದರು.
ಇದಕ್ಕೆ ಪ್ರತ್ಯುತ್ತರವಾಗಿ ಆರ್ಸಿಬಿ ವಿಲ್ ಜಾಕ್ಸ್ (100*) ಬಿರುಸಿನ ಶತಕ ಮತ್ತು ವಿರಾಟ್ ಕೊಹ್ಲಿ (70*) ಅಜೇಯ ಅರ್ಧಶತಕದ ನೆರವಿನಿಂದ ಒಂದು ವಿಕೆಟ್ ಕಳೆದುಕೊಂಡು 24 ಎಸೆತಗಳು ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು. ಇದು ಆರ್ಸಿಬಿಯ ಮೂರನೇ ಗೆಲುವಾಗಿದೆ. ಆದರೆ ಅಂಕಪಟ್ಟಿಯಲ್ಲಿ ಮಾತ್ರ ಯಾವುದೇ ಬದಲಾವಣೆ ಕಂಡು ಬಂದಿಲ್ಲ.