ಸಿಡ್ನಿ (ಆಸ್ಟ್ರೇಲಿಯಾ) :ರನ್ ಗಳಿಸಲು ತಿಪ್ಪರಲಾಗ ಹಾಕುತ್ತಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದಾರಾ? ಇಂಥದ್ದೊಂದು ವದಂತಿ ಕ್ರಿಕೆಟ್ ವಲಯದಲ್ಲಿ ಹಬ್ಬಿದೆ. ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕೊನೆಯ ಟೆಸ್ಟ್ನಿಂದ ಅವರು ಹೊರಬಿದ್ದಿರುವುದು ಈ ವದಂತಿಗೆ ಕಾರಣವಾಗಿದೆ.
ಆಸೀಸ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಭಾರತ ಕ್ರಿಕೆಟ್ ತಂಡದಲ್ಲಿ ಪ್ರತಿ ಪಂದ್ಯದಲ್ಲೂ ಬದಲಾವಣೆ ಮಾಡಲಾಗುತ್ತಿದೆ. ಸಿಡ್ನಿಯ ಐದನೇ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಟ್ಟು ಶುಭ್ಮನ್ ಗಿಲ್ಗೆ ಅವಕಾಶ ನೀಡಲಾಗಿದೆ. ರೋಹಿತ್ ಬ್ಯಾಟ್ನಿಂದ ರನ್ಗಳು ಸಿಡಿಯುತ್ತಿಲ್ಲವಾದ ಕಾರಣ, ಅವರು ದೀರ್ಘ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾಗಿ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ.
ನಿವೃತ್ತಿ ವದಂತಿ ನಿರಾಕರಿಸಿದ ರೋಹಿತ್ :ತಮ್ಮ ನಿವೃತ್ತಿ ವದಂತಿಯನ್ನು ಶನಿವಾರ ಸ್ಪಷ್ಟವಾಗಿ ನಿರಾಕರಿಸಿರುವ ಹಿರಿಯ ಬ್ಯಾಟರ್ ರೋಹಿತ್ ಶರ್ಮಾ ಅವರು, "ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಐದನೇ ಟೆಸ್ಟ್ನಿಂದ ಕಳಪೆ ಫಾರ್ಮ್ ಕಾರಣದಿಂದಾಗಿ ಪಂದ್ಯದಿಂದ ಹಿಂದೆ ಸರಿದಿದ್ದೇನೆ ಅಷ್ಟೇ ಎಂದು ತಿಳಿಸಿದ್ದಾರೆ.