Champions Trophy Live Streaming: ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬುಧವಾರದಿಂದ ಪ್ರಾರಂಭವಾಗಲಿದೆ. ಪಾಕಿಸ್ತಾನ ಮತ್ತು ದುಬೈನಲ್ಲಿ 19 ದಿನಗಳ ಕಾಲ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಬಾಗಿಯಾಗುತ್ತಿವೆ. ನಾಳೆ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿ ಆಗುತ್ತಿವೆ.
ಆದರೆ, ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ಎಲ್ಲಿ ನೋಡಬೇಕು? ಯಾವ ಆ್ಯಪ್ನಲ್ಲಿ ಆಗಲಿವೆ ಲೈವ್ ಮ್ಯಾಚ್ ಸ್ಟ್ರೀಮಿಂಗ್ ಆಗಲಿದೆ ಎಂಬ ಮಾಹಿತಿ ಬಗ್ಗೆ ಈ ಸ್ಟೋರಿಯಲ್ಲಿ ತಿಳಿಯಿರಿ.
ಭಾರತದಲ್ಲಿ ಪಂದ್ಯಗಳ ಪ್ರಸಾರ ಎಲ್ಲಿ?:ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಭಾರತದಲ್ಲಿ, ಜಿಯೋ ಮತ್ತು ಹಾಟ್‌ಸ್ಟಾರ್ ನೆಟ್‌ವರ್ಕ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು 8 ಭಾಷೆಗಳಾದ ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ಬಂಗಾಳಿ, ಮರಾಠಿ, ಭೋಜ್‌ಪುರಿ, ತಮಿಳು ಸೇರಿದಂತೆ ಒಟ್ಟು 16 ಫೀಡ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಸ್ಪೋರ್ಟ್ಸ್ 18 ಚಾನೆಲ್‌ಗಳಲ್ಲಿ ಕನ್ನಡ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ನೇರಪ್ರಸಾರ ಆಗಲಿದೆ.
ಪ್ರಸಾರದ ವಿವರ (ಟಿವಿ, ಡಿಜಿಟಲ್)
ಜಿಯೋಸ್ಟಾರ್ (ಜಿಯೋ ಹಾಟ್‌ಸ್ಟಾರ್, ಸ್ಟಾರ್ ಸ್ಪೋರ್ಟ್, ನೆಟ್‌ವರ್ಕ್ 18 ಚಾನೆಲ್‌ಗಳಲ್ಲಿ ನೇರಪ್ರಸಾರ) ದೂರದರ್ಶನದಲ್ಲಿ ಪಂದ್ಯಗಳು ನೇರ ಪ್ರಸಾರ ಆಗಲಿವೆ.
ಚಾಂಪಿಯನ್ಸ್ ಟ್ರೋಫಿ ಉಚಿತವಾಗಿ ನೋಡಬಹುದೆ?:ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಭಾರತದಲ್ಲಿ ಐಸಿಸಿ ಪಂದ್ಯಾವಳಿಗಳ ಅಧಿಕೃತ ಪ್ರಸಾರಕ ಚಾನೆಲ್ಗಳಾಗಿವೆ. ಈ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.