Mohammed Shami: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯವೂ ರಾಜ್ಕೋಟ್ನ ನಿರಂಜನ್ ಶಾ ಕ್ರಿಕೆಟ್ ಮೈದಾನಲ್ಲಿ ನಡೆಯುತ್ತಿದೆ. ಈ ಪಂದ್ಯದ ಟಾಸ್ ಗೆದ್ದಿರುವ ಟೀಂ ಇಂಡಿಯಾದ ನಾಯಕ ಸೂರ್ಯ ಕುಮಾರ್ ಯಾದವ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡು ಇಂಗ್ಲೆಂಡ್ಅನ್ನು ಬ್ಯಾಟಿಂಗ್ಗೆ ಆಹ್ವಾನಿಸಿದರು.
ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಪ್ಲೇಯಿಂಗ್-11 ರಲ್ಲಿ ದೊಡ್ಡ ಬದಲಾವಣೆ ಮಾಡಿದೆ. ವೇಗದ ಬೌಲರ್ ಅರ್ಷದೀಪ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೇ ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಮಾರಕ ಬೌಲರ್ ಮೊಹಮ್ಮದ ಶಮಿ ಸ್ಥಾನ ಪಡೆದಿದ್ದಾರೆ.
ಶಮಿ ಬರೋಬ್ಬರಿ 2 ವರ್ಷದ ಬಳಿಕ ಅಂತಾರಾಷ್ಟ್ರೀಯ ಟಿ20ಗೆ ಕಾಲಿಟ್ಟಿದ್ದಾರೆ. ಈ ಹಿಂದೆ 2022ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಟಿ20 ಪಂದ್ಯದಲ್ಲಿ ಶಮಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಬಳಿಕ ಏಕದಿನ ವಿಶ್ವಕಪ್ನಲ್ಲಿ ಆಡಿದ್ದ ವೇಳೆ ಅವರ ಪಾದದ ಗಾಯಕ್ಕೆ ತುತ್ತಾಗಿ 14 ತಿಂಗಳು ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಹೊರಗುಳಿದಿದ್ದರು.
ಶಮಿ ಈವರೆಗೆ ಒಟ್ಟು 24 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ 24 ವಿಕೆಟ್ಗಳನ್ನು ಪಡೆದಿದ್ದಾರೆ. 15 ರನ್ಗಳಿಗೆ 3 ವಿಕೆಟ್ ಪಡೆದಿರುವುದು ಇವರ ಬೆಸ್ಟ್ ಸ್ಪೆಲ್ ಆಗಿದೆ. ಇದನ್ನೂ ಹೊರತುಪಡಿಸಿ ಐಪಿಎಲ್ನಲ್ಲಿ 110 ಪಂದ್ಯಗಳನ್ನು ಆಡಿರುವ ಶಮಿ 127 ವಿಕೆಟ್ಗಳನ್ನು ಉರುಳಿಸಿದ್ದಾರೆ. 11 ರನ್ಗಳಿಗೆ 4 ವಿಕೆಟ್ ಪಡೆದಿದ್ದು, ಇವರ ಬೆಸ್ಟ್ ಇನ್ನಿಂಗ್ಸ್ ಆಗಿದೆ.
ತಂಡಗಳು-ಭಾರತ :ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.
ಇಂಗ್ಲೆಂಡ್ :ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ಸ್ಟೋನ್, ಜೇಮಿ ಸ್ಮಿತ್, ಜೇಮೀ ಓವರ್ಟನ್, ಬ್ರೇಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
ಇದನ್ನೂ ಓದಿ:ಗುಡ್ನ್ಯೂಸ್..! ನಾಯಕನಾಗಿ ಕ್ರಿಕೆಟ್ಗೆ ರೀ ಎಂಟ್ರಿ ಕೊಟ್ಟ ಎಬಿ ಡಿವಿಲಿಯರ್ಸ್!