ಕರ್ನಾಟಕ

karnataka

ETV Bharat / sports

ರಾಜ್​ಕೋಟ್​ ತಲುಪಿದ ನಾಯಕ ರೋಹಿತ್ ಶರ್ಮಾ​: ಧ್ರುವ್ ಜುರೆಲ್ ಪದಾರ್ಪಣೆ ಸಾಧ್ಯತೆ - India vs England third test

India vs England third test: ಇಂಗ್ಲೆಂಡ್​ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ರಾಜ್‌ಕೋಟ್‌ಗೆ ಆಗಮಿಸಿದ್ದಾರೆ.

ರೋಹಿತ್ ಶರ್ಮಾ
ರೋಹಿತ್ ಶರ್ಮಾ

By ETV Bharat Karnataka Team

Published : Feb 12, 2024, 10:36 AM IST

ರಾಜ್​ಕೋಟ್​ (ಗುಜರಾತ್):ಇಲ್ಲಿನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ಆರಂಭವಾಗಲಿದೆ. ಇದಕ್ಕಾಗಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯಕ್ಕೆ ನಾಲ್ಕು ದಿನ ಬಾಕಿ ಇರುವಂತೆ ರಾಜ್ ಕೋಟ್ ತಲುಪಿದ್ದಾರೆ.

ಮೂರನೇ ಟೆಸ್ಟ್‌ಗಾಗಿ ಇಂಗ್ಲೆಂಡ್ ತಂಡ ಕೂಡ ಮಂಗಳವಾರ ರಾಜ್‌ಕೋಟ್ ತಲುಪಲಿದೆ. ಸದ್ಯ ಇಂಗ್ಲೆಂಡ್ ಕ್ರಿಕೆಟ್ ತಂಡ ಎರಡನೇ ಟೆಸ್ಟ್‌ ಬಳಿಕ ಅಬುಧಾಬಿಯಲ್ಲಿದೆ. ಮೂರನೇ ಟೆಸ್ಟ್ ಪಂದ್ಯದ ಅಂತರದಿಂದಾಗಿ ಅಬುಧಾಬಿಯಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ವಿಶ್ರಾಂತಿ ನೀಡಲು ಇಸಿಬಿ ನಿರ್ಧರಿಸಿತ್ತು.

ಮೂಲಗಳ ಪ್ರಕಾರ ಮೂರನೇ ಟೆಸ್ಟ್​ ಪಂದ್ಯದಲ್ಲಿ ಯುವ ಆಟಗಾರ ಧ್ರುವ್ ಜುರೆಲ್ ಭಾರತ ತಂಡದ ವಿಕೆಟ್ ಕೀಪರ್ ಆಗಿ ಟೆಸ್ಟ್​ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ಸಂಭವವಿದೆ. ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಧ್ರುವ್​ ಜುರೆಲ್​ಗೆ ಅವಕಾಶ ಸಿಕ್ಕಿಲ್ಲ. ಧ್ರುವ್ ಜುರೆಲ್‌ಗೆ ಅವಕಾಶ ಸಿಕ್ಕರೆ ಕೆ.ಎಸ್ ಭರತ್ ಆಡುವ 11ರ ಬಳಗದಿಂದ ಹೊರಗುಳಿಯಬಹುದು. ಸ್ಟಾರ್​ ವೇಗದ ಬೌಲರ್​ ಜಸ್ಪ್ರೀತ್ ಬುಮ್ರಾ ಕೂಡ ವಿಶ್ರಾಂತಿ ಪಡೆಯಲು ಮೂರನೇ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳಬಹುದು. ಈಗಾಗಲೇ ಎರಡು ಪಂದ್ಯಗಳಲ್ಲಿ ತಮ್ಮ ಅದ್ಬುತ ಬೌಲಿಂಗ್​ ಪ್ರದರ್ಶನ ನೀಡಿದ್ದಾರೆ.

ಫೆ.10 ಶನಿವಾರ ಇನ್ನುಳಿದಿರುವ ಮೂರು ಟೆಸ್ಟ್​ ಪಂದ್ಯಗಳಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಮ್​ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ಇದರಲ್ಲಿ ಮತ್ತೋರ್ವ ವೇಗದ ಬೌಲರ್​ ಆಕಾಶ್ ದೀಪ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಆದರೆ, ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗಿದ್ದು, ವಿರಾಟ್ ಕೊಹ್ಲಿ ಸಹಾ ವೈಯಕ್ತಿಕ ಕಾರಣಗಳಿಂದ ತಂಡದಿಂದ ಹೊರಗುಳಿದಿದ್ದಾರೆ. ಮೂರನೇ ಟೆಸ್ಟ್‌ಗೂ ಮುನ್ನ ಇಂಗ್ಲೆಂಡ್ ಕೂಡ ದೊಡ್ಡ ಹಿನ್ನಡೆ ಅನುಭವಿಸಿದೆ. ಪ್ರಮುಖ ಸ್ಪಿನ್ ಬೌಲರ್ ಜಾಕ್ ಲೀಚ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

ಜೊತೆಗೆ ಮೂರನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಆಡುವ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡದಿಂದ ಬರುವ ರಿಪೋರ್ಟ್​ ಮೇಲೆ ಅವಲಂಬಿಸಿರುತ್ತದೆ. ಕೆ.ಎಲ್ ರಾಹುಲ್ ಆಡಲು ಸಾಧ್ಯವಾಗದಿದ್ದರೆ ಸರ್ಫರಾಜ್ ಖಾನ್ ಆಡುವುದು ಖಚಿತ. ಇನ್ನು ಮೂರನೇ ಟೆಸ್ಟ್‌ನಲ್ಲಿ ಟೀಮ್​ ಇಂಡಿಯಾ ಎಷ್ಟು ಸ್ಪಿನ್ ಬೌಲರ್‌ಗಳೊಂದಿಗೆ ಕಣಕ್ಕಿಳಿಯಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಪ್ರಸ್ತುತ ಭಾರತ ಮತ್ತು ಇಂಗ್ಲೆಂಡ್​ ನಡುವಿನ ಐದು ಟೆಸ್ಟ್‌ಗಳ ಸರಣಿಯಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿವೆ. ಹೈದರಾಬಾದ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ 28 ರನ್‌ಗಳಿಂದ ಭಾರತವನ್ನು ಸೋಲಿಸಿದರೆ, ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಭಾರತ 106 ರನ್‌ಗಳಿಂದ ಗೆದ್ದಿದೆ. ಭಾರತದ ಆರಂಭಿಕ ಎಡಗೈ ಬ್ಯಾಟರ್​ ಯಶಸ್ವಿ ಜೈಸ್ವಾಲ್ ವಿಶಾಖಪಟ್ಟಣಂನಲ್ಲಿ ದ್ವಿಶತಕ ಸಿಡಿಸಿದ್ದರೆ, ಶುಭಮನ್ ಗಿಲ್ ಕೂಡ ಶತಕ ಬಾರಿಸಿದ್ದರು.

ಇದನ್ನೂ ಓದಿ :ಅಂಡರ್​19 ವಿಶ್ವಕಪ್​​: ಭಾರತ ಯುವ ತಂಡಕ್ಕೆ ನಿರಾಸೆ; ಆಸ್ಟ್ರೇಲಿಯಾಗೆ ಚಾಂಪಿಯನ್​ ಪಟ್ಟ

ABOUT THE AUTHOR

...view details