ಹೈದರಾಬಾದ್: ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಇಂದು ನ್ಯೂಜಿಲೆಂಡ್ ತಂಡ ಭಾರತ ವಿರುದ್ಧ 25 ರನ್ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಕಿವೀಸ್ ಕ್ಲೀನ್ ಸ್ವೀಪ್ ಮಾಡಿತು. ಇನ್ನೊಂದೆಡೆ, ಭಾರತ 92 ವರ್ಷಗಳ ನಂತರ ತವರಿನಲ್ಲಿ ನಡೆದ ಮೂರು ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳನ್ನು ಸೋತು ವೈಟ್ವಾಶ್ ಆಯಿತು.
ಭಾರತದಲ್ಲಿ ಇತಿಹಾಸ ನಿರ್ಮಿಸಿದ ನ್ಯೂಜಿಲೆಂಡ್; 92 ವರ್ಷಗಳ ಬಳಿಕ ತವರಿನಲ್ಲಿ ಟೀಂ ಇಂಡಿಯಾ ವೈಟ್ವಾಶ್ - IND VS NZ
ನ್ಯೂಜಿಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ 25 ರನ್ಗಳಿಂದ ಸೋಲನುಭವಿಸಿದೆ.
Published : Nov 3, 2024, 1:22 PM IST
2000ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಆಗಿತ್ತು. ಆದರೆ 3 ಅಥವಾ ಅದಕ್ಕಿಂತ ಹೆಚ್ಚಿನ ಟೆಸ್ಟ್ ಪಂದ್ಯಗಳಲ್ಲಿ ಒಮ್ಮೆಯೂ ಕ್ಲೀನ್ ಸ್ವೀಪ್ ಆಗಿರಲಿಲ್ಲ.
ಈ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ 235 ರನ್‌ಗಳಿಗೆ ಸರ್ವಪತನ ಕಂಡಿದ್ದ ಕಿವೀಸ್ ಪಡೆ ಎರಡನೇ ಇನ್ನಿಂಗ್ಸ್ನಲ್ಲೂ ಸ್ಪಿನ್ ಬಲೆಗೆ ಸಿಲುಕಿ 174 ರನ್ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಭಾರತಕ್ಕೆ 147 ರನ್ಗಳ ಸಾಮಾನ್ಯ ಗುರಿ ನೀಡಿತ್ತು. ಇದನ್ನು ಬೆನ್ನತ್ತಿದ ಭಾರತ, ಅಜಾಜ್ ಪಟೇಲ್ ಸ್ಪೀನ್ ದಾಳಿಗೆ ಸಿಲುಕಿ ಕೇವಲ 121 ರನ್‌ಗಳಿಗೆ ಸರ್ವಪತನ ಕಂಡಿತು. ಭಾರತದ ಪರ ರಿಷಭ್ ಪಂತ್ ಅರ್ಧಶತಕ ಸಿಡಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್ಗಳು ಕ್ರೀಸ್ನಲ್ಲಿ ನೆಲೆಯೂರಲು ಸಾಧ್ಯವಾಗಲಿಲ್ಲ.