Ind vs Pak Virat Kohli : ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 14 ರನ್ ಗಳಿಸುತ್ತಿದ್ದಂತೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದುಬಿದ್ದಿದೆ.
ದುಬೈನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿರುವ ಪಾಕಿಸ್ತಾನ 241 ರನ್ ಗಳಿಸಿ ಆಲೌಟ್ ಆಗಿದೆ. ಈ ಗುರಿಯನ್ನು ಬೆನ್ನತ್ತಿದ್ದ ಭಾರತ, 3 ವಿಕೆಟ್ ಕಳೆದುಕೊಂಡು ಗುರಿಯನ್ನು ಸುಲಭವಾಗಿ ತಲುಪಿ ಪಾಕಿಸ್ತಾನವನ್ನು ತಂಡವನ್ನು ಮಣಿಸಿತು. ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ (20), ಶುಭಮನ್ ಗಿಲ್ (46) ಪೆವಿಲಿಯನ್ ಸೇರಿದರು. ಶ್ರೇಯಸ್ ಅಯ್ಯರ್ 56 ರನ್ ಗಳಿಸಿ ಔಟ್ ಆದರು. ಪಾಂಡ್ಯ ಸಹ ಬಹುಬೇಗ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು.
ರೊಹಿತ್ ಬಳಿಕ ಬ್ಯಾಟಿಂಗ್ಗೆ ಬಂದ ವಿರಾಟ್ ಭರ್ಜರಿ ಶತಕ ಸಿಡಿಸಿದರು. ಇದರೊಂದಿಗೆ ದಾಖಲೆಯನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ 15 ರನ್ ಗಳಿಸುತ್ತಿದ್ದಂತೆ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ 14,000 ರನ್‌ಗಳನ್ನು ಪೂರ್ಣಗೊಳಿಸಿದರು. ಇದರೊಂದಿಗೆ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದರು.
ದಾಖಲೆ ಬರೆದ ಕೊಹ್ಲಿ : ವಿರಾಟ್ 287 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದರು. ಈ ಅನುಕ್ರಮದಲ್ಲಿ, ಅವರು ಏಕದಿನ ಪಂದ್ಯಗಳಲ್ಲಿ 14,000 ರನ್‌ಗಳನ್ನು ಪೂರ್ಣಗೊಳಿಸಿದ ಅತ್ಯಂತ ವೇಗದ ಆಟಗಾರ ಎಂಬ ದಾಖಲೆಯನ್ನು ಸೃಷ್ಟಿಸಿದರು. ಒಟ್ಟಾರೆ 14,000+ ಏಕದಿನ ರನ್ ಗಳಿಸಿದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ಹೆಸರಲ್ಲಿತ್ತು. ಸಚಿನ್ 350 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರೆ, ಶ್ರೀಲಂಕಾದ ಬ್ಯಾಟ್ಸ್‌ಮನ್ 378 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ್ದರು.