Test Ranking: ಇತ್ತೀಚೆಗೆ ನಡೆದಿದ್ದ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ 3-1 ಅಂತರದಲ್ಲಿ ಸೋಲನುಭವಿಸಿರುವ ಟೀಮ್ ಇಂಡಿಯಾ ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ಕುಸಿತ ಕಂಡಿದೆ.
9 ವರ್ಷಗಳ ಬಳಿಕ ಟೀಂ ಇಂಡಿಯಾ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ-2 ಸ್ಥಾನ ಬಿಟ್ಟು ಮೂರನೇ ಸ್ಥಾನಕ್ಕೆ ಕುಸಿದಿದೆ. ಆದಾಗ್ಯೂ, ಆಡಿರುವ ಕೊನೆಯ 8 ಟೆಸ್ಟ್ ಪಂದ್ಯಗಳಲ್ಲಿ ಭಾರತ 6ರಲ್ಲಿ ಸೋತು WTC ಫೈನಲ್‌ಗೆ ತಲುಪಲು ವಿಫಲವಾಯಿತು.
ಮತ್ತೊಂದೆಡೆ ದಕ್ಷಿಣ ಆಫ್ರಿಕಾ ಸತತ ಏಳು ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಟೆಸ್ಟ್ ಶ್ರೇಯಾಂಕದಲ್ಲೂ ಭಾರೀ ಜಿಗಿತ ಕಂಡಿದೆ. ಸುಧಾರಿಸಲು ಸಹಾಯ ಮಾಡಿದೆ. ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 2-0 ಅಂತರದಲ್ಲಿ ಗೆಲುವು ಸಾಧಿಸುವುದರ ಜೊತೆಗೆ ಟೆಸ್ಟ್ನಲ್ಲಿ ಎರಡನೇ ಸ್ಥಾನಕ್ಕೆ ತಲುಪಿದೆ. ಸಧ್ಯ 112 ರೇಟಿಂಗ್ ಅಂಕಗಳೊಂದಿಗೆ ಹರಿಣ ಪಡೆ ಭಾರತವನ್ನು ಹಿಂದಿಕ್ಕಿದೆ.