ಹೈದರಾಬಾದ್: U-19 ಏಷ್ಯಾಕಪ್ ಟೂರ್ನಿಯ 3ನೇ ಪಂದ್ಯದಲ್ಲೂ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ 44 ರನ್‌ಳಿಂದ ಸೋಲನುಭವಿಸಿದೆ. ದುಬೈನಲ್ಲಿ ಶನಿವಾರ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು. ಪಾಕ್ ಪರ ಆರಂಭಿಕ ಬ್ಯಾಟರ್ಗಳಾದ ಉಸ್ಮಾನ್ ಖಾನ್ (60) ಅರ್ಧಶತಕ ಸಿಡಿಸಿ ಮಿಂಚಿದರೇ, ಮತ್ತೊಂದು ತುದಿಯಲ್ಲಿ ಶಾಜೈಬ್ ಖಾನ್ ಭರ್ಜರಿ ಶತಕ ಬಾರಿಸಿದರು. 147 ಎಸೆತಗಳನ್ನು ಎದುರಿಸಿದ ಶಾಜೈಬ್ ಐದು ಬೌಂಡರಿ ಹಾಗೂ ಹತ್ತು ಸಿಕ್ಸರ್‌ಗಳ ಸಹಾಯದಿಂದ 159 ರನ್ ಗಳಿಸಿದರು.
ಉಳಿದಂತೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಮೊಹಮ್ಮದ್ ರಿಯಾಜುಲ್ಲಾ 27ರನ್‌ಗಳ ಕೊಡುಗೆ ನೀಡಿದರು. ಉಳಿದ ಬ್ಯಾಟರ್ಗಳು ಎರಡಂಕಿ ಗಳಿಸಲು ಸಾಧ್ಯವಾಗಲಿಲ್ಲ. ಆದರೆ, ಆರಂಭಿಕರು ಹಾಕಿದ ಭದ್ರ ಬುನಾದಿಯಿಂದಾಗಿ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 281ರನ್ ಕಲೆಹಾಕಿತು. ಭಾರತದ ಪರ ಬೌಲಿಂಗ್ನಲ್ಲಿ ಸಮರ್ಥ್ ನಾಗರಾಜ್ 3 ಮತ್ತು ಯುಧಾಜಿತ್ ಗುಹಾ, ಕಿರಣ್ ಚೋರ್ಮಲೆ ತಲಾ ಒಂದು ವಿಕೆಟ್ ಪಡೆದರು.
ಭಾರತಕ್ಕೆ ಆರಂಭಿಕ ಹಿನ್ನಡೆ:282 ರನ್‌ಗಳ ಬೃಹತ್ ಗುರಿಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭದಲ್ಲೇ ಹಿನ್ನಡೆಯಾಯಯಿತು. ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ 9 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ಪೆವಿಲಿಯನ್ ಸೇರಿದರು. ಮತ್ತೋರ್ವ ಆರಂಭಿಕ ಬ್ಯಾಟರ್ ಆಯುಷ್ ಮ್ಹಾತ್ರೆ 20 ರನ್, ನಾಯಕ ಮೊಹ್ಮದ್ 16 ರನ್ ಗಳಿಸಿ ನಿರ್ಗಮಿಸಿದರು. ಇದರಿಂದಾಗಿ ಭಾರತ 82 ರನ್ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡಿತು.