IND vs AUS, Test Series:ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬಾರ್ಡರ್-ಗವಾಸ್ಕರ್ ಟ್ರೋಫಿಯ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಈಗಾಗಲೇ ಎರಡು ಪಂದ್ಯಗಳು ಮುಗಿದಿದ್ದು ಉಭಯ ತಂಡಗಳು ತಲಾ ಒಂದರಲ್ಲಿ ಗೆದ್ದು 1-1 ಅಂತರದಿಂದ ಸಮಬಲ ಸಾಧಿಸಿವೆ. ಅಡಿಲೇಡ್ನ ಎರಡನೇ ಪಂದ್ಯದಲ್ಲಿ ಕಳಪೆ ಪ್ರದರ್ಶನ ತೋರಿ ಹೀನಾಯವಾಗಿ ಸೋಲನುಭವಿಸಿದ್ದ ಟೀಂ ಇಂಡಿಯಾ, ಗುರುವಾರ (ಡಿಸೆಬಂರ್ 14)ದಿಂದ ಆರಂಭವಾಗಲಿರುವ ಮೂರನೇ ಪಂದ್ಯವನ್ನು ಗೆಲ್ಲಲೇಬೇಕೆಂದು ಪಣತೊಟ್ಟಿದೆ.
ಇದಕ್ಕಾಗಿ ಕಳೆದ ಎರಡು ದಿನಗಳಿಂದ ಆಟಗಾರರು ನೆಟ್ಸ್ನಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಇದರ ನಡುವೆ ಅಭ್ಯಾಸದ ವೇಳೆ ಓರ್ವ ಸ್ಟಾರ್ ಆಟಗಾರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೌದು, ವಿಕೆಟ್ ಕೀಪರ್ ಮತ್ತು ಬ್ಯಾಟರ್ ರಿಷಭ್ ಪಂತ್ ನೆಟ್ಸ್ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಗಾಯಗೊಂಡಿದ್ದಾರೆ.
ಪಂತ್ ನೆಟ್ಸ್ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದರು. ಥ್ರೋಡೌನ್ ಸ್ಪೆಷಲಿಸ್ಟ್ ರಘು ಅವರು ಪಂತ್ಗೆ ಬೌಲಿಂಗ್ ಮಾಡುತ್ತಿದ್ದರು. ಈ ವೇಳೆ ರಘು ಎಸೆದ ಚೆಂಡೊಂದು ನೇರವಾಗಿ ಪಂತ್ ಅವರಿಗೆ ತಾಕಿ ಗಾಯಗೊಂಡಿದ್ದಾರೆ. ನಂತರ ಪಂತ್ ಬ್ಯಾಟಿಂಗ್ ಅಭ್ಯಾಸ ನಿಲ್ಲಿಸಿದರು. ಕೂಡಲೇ ಅಲ್ಲಿದ್ದ ವೈದ್ಯಕೀಯ ತಂಡ ಪಂತ್ ಅವರನ್ನು ಪರಿಶೀಲಿಸಿದ್ದು, ಗಂಭೀರ ಗಾಯವಲ್ಲ ಎಂದು ತಿಳಿಸಿದೆ. ಬಳಿಕ ಸ್ವಲ್ಪ ಸಮಯ ವಿಶ್ರಾಂತಿ ಪಡೆದು ಮತ್ತೆ ಬ್ಯಾಟಿಂಗ್ಗೆ ಮರಳಿದ್ದಾರೆ.