Ind vs Aus 2nd Test:ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಮತ್ತೊಂದು ಪಂದ್ಯಕ್ಕೆ ಸಜ್ಜಾಗಿದೆ. ಇಂದಿನಿಂದ ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್‌ನ ಓವೆಲ್ ಮೈದಾನದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. ಪಿಂಕ್ ಬಾಲ್ ಪಂದ್ಯವಾದ ಇದು ಡೇ/ನೈಟ್ ಟೆಸ್ಟ್ ಆಗಿದೆ. ಆಸ್ಟ್ರೇಲಿಯಾ ಇದುವರೆಗೆ ಅಡಿಲೇಡ್‌ನಲ್ಲಿ ಏಳು ಹಗಲು/ರಾತ್ರಿ ಟೆಸ್ಟ್‌ಗಳನ್ನು ಆಡಿದ್ದು ಎಲ್ಲದರಲ್ಲೂ ಗೆಲುವು ಸಾಧಿಸಿದೆ.
ಮತ್ತೊಂದೆಡೆ, ಭಾರತ ಒಟ್ಟು ನಾಲ್ಕು ಪಿಂಕ್ ಬಾಲ್ ಟೆಸ್ಟ್‌ಗಳನ್ನು ಆಡಿದ್ದು ಅವುಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿದೆ. ಬಾಂಗ್ಲಾದೇಶ, ಇಂಗ್ಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ಗೆದ್ದಿದೆ. ಈ ಹಿಂದೆ ಅಡಿಲೇಡ್ ಮೈದಾನದಲ್ಲಿ ಆಸೀಸ್ ವಿರುದ್ಧ ಆಡಿದ ಪಂದ್ಯದಲ್ಲಿ ಸೋಲನುಭವಿಸಿತ್ತು. ಕೇವಲ 36 ರನ್‌ಗಳಿಗೆ ಕುಸಿದಿದ್ದ ಭಾರತ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಡಿಮೆ ಸ್ಕೋರ್ ದಾಖಲಿಸಿತ್ತು. ಇಂದಿನ ಪಂದ್ಯದೊಂದಿಗೆ ಈ ಕಹಿ ನೆನಪುಗಳನ್ನು ಅಳಿಸಿ ಹಾಕಲು ಟೀಂ ಇಂಡಿಯಾ ಸಂಕಲ್ಪ ತೊಟ್ಟಿದೆ.
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಯಾವ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಮಧ್ಯಮ ಕ್ರಮಾಂಕದಲ್ಲಿ ಬರುತ್ತೇನೆ ಎಂದು ಹಿಟ್ ಮ್ಯಾನ್ ಸ್ಪಷ್ಟಪಡಿಸಿದ್ದರೂ ನಂ.5 ಅಥವಾ 6ಕ್ಕೆ ಬರುತ್ತಾರಾ ಎಂಬುದು ಕುತೂಹಲ ಮೂಡಿಸಿದೆ. ವೈಯಕ್ತಿಕ ಕಾರಣಗಳಿಂದ ರೋಹಿತ್ ಮೊದಲ ಪಂದ್ಯದಿಂದ ಹೊರಗುಳಿದಿರುವುದು ಗೊತ್ತೇ ಇದೆ. ಮತ್ತೊಂದೆಡೆ ಈ ಪಿಚ್ನಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಕ್ಕೂ ಬೆಂಬಲ ಸಿಗಲಿದೆ. ಆದರೆ, ಅಡಿಲೇಡ್ ಪಿಚ್ ಸಾಮಾನ್ಯವಾಗಿ ವೇಗಿಗಳಿಗೆ ಹೆಚ್ಚು ಅನುಕೂಲಕರವಾಗಿರುತ್ತದೆ ಎನ್ನಲಾಗಿದೆ.