IND vs BAN:ಇಂದಿನಿಂದ ಭಾರತ ಐಸಿಸಿ ಚಾಂಪಿಯನ್ಸ್ ಟ್ರೋಫಿ ಅಭಿಯಾನವನ್ನು ಪ್ರಾರಂಭಿಸಲಿದೆ. ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿದ್ದ ಭಾರತ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ದುಬೈನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ಬಾಂಗ್ಲಾವನ್ನು ನಜ್ಮುಲ್ ಹೊಸೈನ್ ಶಾಂಟೋ ಮುನ್ನಡೆಸುತ್ತಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಎರಡನೇ ಬಾರಿಗೆ ಈ ತಂಡಗಳು ಮುಖಾಮುಖಿ ಆಗುತ್ತಿವೆ.
ಭಾರತಕ್ಕೆ ಗೆಲುವ: ಈ ಹಿಂದೆ 2017ರಲ್ಲಿ ಭಾರತ ಮತ್ತು ಬಾಂಗ್ಲಾ ನಡುವೆ ಪಂದ್ಯ ನಡೆದಿತ್ತು. ಇದರಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ ಈ ಪಂದ್ಯದಲ್ಲೂ ಗೆದ್ದು ಅಜೇಯವಾಗಿ ಗೆಲುವಿನ ಓಟ ಮುಂದುವರೆಸಲು ಭಾರತ ಸಜ್ಜಾಗಿದೆ.
ಹೆಡ್ ಟು ಹೆಡ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ಇದುವರೆಗೆ ಒಟ್ಟು 41 ಏಕದಿನ ಪಂದ್ಯಗಳು ನಡೆದಿವೆ. ಇವುಗಳಲ್ಲಿ ಭಾರತ 32 ಪಂದ್ಯಗಳಲ್ಲಿ ಗೆದ್ದು ಪ್ರಾಬಲ್ಯ ಸಾಧಿಸಿದರೇ, ಬಾಂಗ್ಲಾ ಕೇವಲ 8 ಪಂದ್ಯಗಳಲ್ಲಿ ಮಾತ್ರ ಜಯಗಳಿಸಿದೆ. ಒಂದು ಪಂದ್ಯ ರದ್ದಾಗಿದೆ. ದುಬೈನಲ್ಲಿ ಉಭಯ ತಂಡಗಳ ನಡುವೆ ಒಟ್ಟು 12 ಪಂದ್ಯಗಳು ನಡೆದಿದ್ದು, ಅದರಲ್ಲಿ ಭಾರತ 10 ಪಂದ್ಯಗಳಲ್ಲಿ ಗೆದ್ದರೆ, ಬಾಂಗ್ಲಾ ಎರಡು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ.
IND vs BAN ನೇರಪ್ರಸಾರ, ಲೈವ್ ಸ್ಟ್ರೀಮಿಂಗ್ ವಿವರ