Ind vs Ban: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಆತಿಥ್ಯ ವಹಿಸಿಕೊಳ್ಳುತ್ತಿದೆ.
ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಬಾಂಗ್ಲಾ ತಂಡದ ನಾಯಕತ್ವದ ಜವಾಬ್ದಾರಿ ನಜ್ಮುಲ್ ಹಸನ್ ಶಾಂಟೋಗೆ ನೀಡಲಾಗಿದೆ. ಉಭಯ ತಂಡಗಳಿಗೆ ಚಾಂಪಿಯನ್ಸ್ ಟ್ರೋಫಿ 2025ರ ಮೊದಲ ಪಂದ್ಯ ಇದಾಗಿದೆ. ಈ ಟೂರ್ನಿಯಲ್ಲಿ ಎಲ್ಲ ತಂಡಗಳು ತಲಾ ಮೂರು ಪಂದ್ಯಗಳನ್ನು ಮಾತ್ರ ಆಡುತ್ತಿದ್ದು ಈ ಹಿನ್ನೆಲೆ ಪ್ರತಿಯೊಂದು ಪಂದ್ಯವೂ ಮಹತ್ವದಾಗಿದೆ.
ಭಾರತ ಮತ್ತು ಬಾಂಗ್ಲಾ ತಂಡಗಳು ಕೂಡ ಈ ಪಂದ್ಯದಲ್ಲಿ ಗೆದ್ದು ಉತ್ತಮ ಆರಂಭದ ಗುರಿಯನ್ನು ಹೊಂದಿವೆ. ಏತನ್ಮಧ್ಯೆ ಬಾಂಗ್ಲಾ ವಿರುದ್ಧದ ಈ ಪಂದ್ಯದಕ್ಕೆ ಭಾರತ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ. ಹಾಗಾದರೆ ಭಾರತದ ಸಂಭಾವ್ಯ ಪ್ಲೇಯಿಂಗ್-11 ಹೇಗಿರಲಿದೆ ಎಂದು ಇದೀಗ ತಿಳಿಯೋಣ.
ಟಾಪ್ ಆರ್ಡರ್:ಭಾರತೀಯ ಕ್ರಿಕೆಟ್ ತಂಡದ ಟಾಪ್ ಆರ್ಡರ್ ಸಂಪೂರ್ಣವಾಗಿ ಸಿದ್ಧವಾಗಿದೆ. ನಾಯಕ ರೋಹಿತ್ ಶರ್ಮಾ ಮತ್ತು ಉಪನಾಯಕ ಶುಭಮನ್ ಗಿಲ್ ಆರಂಭಿಕರಾಗಿ ಇನ್ನಿಂಗ್ಸ್ ಪ್ರಾರಂಭಿಸಲಿದ್ದಾರೆ. ಈ ಇಬ್ಬರ ನಂತರ, ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿ ಕಣಕ್ಕಿಳಿಯಲಿದ್ದಾರೆ.
ಮಧ್ಯಮ ಕ್ರಮಾಂಕ:ಮಧ್ಯಮ ಕ್ರಮಾಂಕದ ಜವಾಬ್ದಾರಿ ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್ ಅವರ ಕೈಯಲ್ಲಿರುತ್ತದೆ. ಅಯ್ಯರ್ 4 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಮತ್ತು ಅಕ್ಷರ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ. 6ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.